ಕಲಬುರಗಿ: ಹಾಡಹಗಲೇ ಚಾಕು ಇರಿದು ದಂತ ವೈದ್ಯರೊಬ್ಬರ ಕೊಲೆಗೆ ಯತ್ನಿಸಿರುವ ಘಟನೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದಿದೆ.
ಇದನ್ನೂ ಓದಿ:ಗಂಡ ಹೆಂಡತಿ ಜಗಳಕ್ಕೆ 'ಪಕ್ಕದ ಮನೆಯವ ಬಲಿ'
ಕಲಬುರಗಿ: ಹಾಡಹಗಲೇ ಚಾಕು ಇರಿದು ದಂತ ವೈದ್ಯರೊಬ್ಬರ ಕೊಲೆಗೆ ಯತ್ನಿಸಿರುವ ಘಟನೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದಿದೆ.
ಇದನ್ನೂ ಓದಿ:ಗಂಡ ಹೆಂಡತಿ ಜಗಳಕ್ಕೆ 'ಪಕ್ಕದ ಮನೆಯವ ಬಲಿ'
ಸಿದ್ಧಗಂಗಾ ಡೆಂಟಲ್ ಆಸ್ಪತ್ರೆಯ ಡಾ.ವಿಶ್ವನಾಥ್ ಪಾಟೀಲ್ ಅವರಿಗೆ ಅಪರಿಚಿತ ವ್ಯಕ್ತಿಯೋರ್ವ ಚಾಕುವಿನಿಂದ ಇರಿದಿದ್ದಾನೆ. ರಸ್ತೆ ಬದಿ ಕಾರು ನಿಲ್ಲಿಸಿ ವೈದ್ಯರು ಆಸ್ಪತ್ರೆಗೆ ಹೋಗುತ್ತಿದ್ದಾಗ ಹೊಟ್ಟೆಗೆ ಇರಿದು ಕೊಲೆಗೆ ಯತ್ನಿಸಿದ್ದಾನೆ. ಗಾಯಗೊಂಡ ವಿಶ್ವನಾಥ್ ಹೊಟ್ಟೆಯಿಂದ ರಕ್ತಸ್ರಾವವಾಗಿದೆ.
ದುಷ್ಕರ್ಮಿಯನ್ನು ಸಾರ್ವಜನಿಕರು ಹಿಡಿದು ಥಳಿಸಿದ್ದಾರೆ. ಈತನ ಬಳಿ ನೋಟ್ ಬುಕ್ ಪತ್ತೆಯಾಗಿದ್ದು, ಇದರಲ್ಲಿ ಡಾ.ವಿಶ್ವನಾಥ್ ಅವರ ಬಗ್ಗೆ ಬರೆದುಕೊಂಡಿದ್ದಾನೆ. ಮೇಲ್ನೋಟಕ್ಕೆ ಹಳೆ ವೈಷಮ್ಯವೇ ಕಾರಣ ಎನ್ನಲಾಗುತ್ತಿದೆ. ಸ್ಥಳಕ್ಕೆ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.