ಕರ್ನಾಟಕ

karnataka

ETV Bharat / state

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಕಲಬುರಗಿಯ ಚೌಕ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಲಬುರಗಿ
ಕಲಬುರಗಿ

By ETV Bharat Karnataka Team

Published : Dec 7, 2023, 7:12 PM IST

Updated : Dec 7, 2023, 8:05 PM IST

ನಗರ ಪೊಲೀಸ್ ಆಯುಕ್ತ ಚೇತನ್ ಆರ್

ಕಲಬುರಗಿ :ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ನ್ನು ಇಲ್ಲಿನ ಚೌಕ್ ಠಾಣೆ ಪೊಲೀಸರು ಗಂಜ್ ಪ್ರದೇಶದಲ್ಲಿರುವ ಭಾರತ್ ಪ್ರೈಡ್ ಅಪಾರ್ಟ್​ಮೆಂಟ್​ನಲ್ಲಿ ವಶಕ್ಕೆ ಪಡೆದಿದ್ದಾರೆ. ರಸ್ತೆ ಅಪಘಾತವನ್ನು ಕೊಲೆ ಯತ್ನ ಎಂದು ಬಿಂಬಿಸಿರುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ಆದರೆ, ಪೊಲೀಸರು ನಿಜಾಂಶವನ್ನು ಮುಚ್ಚಿಟ್ಟಿದ್ದಾರೆಂದು ಮಣಿಕಂಠ ರಾಠೋಡ್ ಇಂದು ಮಾಧ್ಯಮಗೋಷ್ಟಿ ಕರೆದಿದ್ದರು. ಇದಕ್ಕೂ ಮುನ್ನವೇ ಮಣಿಕಂಠ ರಾಠೋಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

''ನಾವು ಕಾನೂನು ಸುವ್ಯವಸ್ಥೆ ಹಿತದೃಷ್ಠಿಯಿಂದ ಅವರನ್ನು ವಶಪಡಿಸಿಕೊಂಡಿದ್ದೇವೆ. ಮುಂದಿನ ಕಾನೂನು ಕ್ರಮ ಏನಿದೆಯೋ ಅದನ್ನು ನಾವು ಮಾಡುತ್ತೇವೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಸ್ವಲ್ಪ ತೊಂದರೆಯಾಗುತ್ತಿದೆ ಎಂಬುದರ ಹಿನ್ನೆಲೆಯಲ್ಲಿ ಮಾಹಿತಿ ಬಂದಿದೆ. ಹೀಗಾಗಿ ನಾವು ಅವರನ್ನು ವಶಕ್ಕೆ ಪಡೆದಿದ್ದೇವೆ. ಕೆಲವೊಮ್ಮೆ ನಮಗೆ ಇಂಟಲಿಜೆನ್ಸ್​ನಿಂದ ಮೆಸೇಜ್​ ಇರುತ್ತೆ. ಅದನ್ನೇ ನಾವು ಎಫ್​ಐಆರ್​ನಲ್ಲಿ ದಾಖಲಿಸುತ್ತೇವೆ'' ಎಂದು ನಗರ ಪೊಲೀಸ್ ಆಯುಕ್ತ ಚೇತನ್ ಆರ್ ಅವರು ತಿಳಿಸಿದ್ದಾರೆ.

ಮಣಿಕಂಠ ರಾಠೋಡ್​ ಮೇಲೆ ದಾಳಿಯೇ ನಡೆದಿಲ್ಲ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​​ ಮೇಲೆ ದಾಳಿಯೇ ನಡೆದಿಲ್ಲ, ಕಾರು ಅಪಘಾತದಲ್ಲಿ ಗಾಯಗೊಂಡು ಸುಖಾಸುಮ್ಮನೆ ಪ್ರಿಯಾಂಕ್ ಖರ್ಗೆ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂದು ಆರೋಪ ಮಾಡಿರುವುದು ಪೊಲೀಸ್​ ತನಿಖೆಯಿಂದ ತಿಳಿದು ಬಂದಿದೆ. ಈ ಕುರಿತು ಕಲಬುರಗಿ ಎಸ್​ಪಿ ಅಡ್ಡೂರು ಶ್ರೀನಿವಾಸಲು ಸ್ಪಷ್ಟೀಕರಣ ನೀಡಿದ್ದಾರೆ.

"ಮಣಿಕಂಠ ರಾಠೋಡ್​ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಶಹಾಬಾದ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ಮಾಡಿದಾಗ ಅವರ ಮೇಲೆ ಹಲ್ಲೆಯಾಗಿರಲಿಲ್ಲ, ಅದೊಂದು ಅಪಘಾತ ಪ್ರಕರಣವೆಂದು ತನಿಖೆಯಲ್ಲಿ ಬಯಲಾಗಿದೆ. ಸಾಕ್ಷಿದಾರರ ಹೇಳಿಕೆ ಹಾಗೂ ಪೊಲೀಸ್ ತನಿಖೆಯಲ್ಲಿ ಅಪಘಾತವಾಗಿರುವುದು ಗೊತ್ತಾಗಿದೆ. ಯಾದಗಿರಿ ಜಿಲ್ಲೆಯ ಗುರಮಠಕಲ್ ಹತ್ತಿರದ ಚೆಪೆಟ್ಲಾದಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ನ್ಯಾಯಾಧೀಶರ ಮುಂದೆ ಸಾಕ್ಷಿದಾರರ ಹೇಳಿಕೆಯನ್ನು ಪಡೆಯಲಾಗಿದೆ. ಅಪಘಾತವಾದ ಕಾರನ್ನು ಹೈದರಾಬಾದ್​ನ ಶೋ ರೂಮ್​ವೊಂದರಲ್ಲಿ ಬಿಟ್ಟಿರುವುದು ಪತ್ತೆಯಾಗಿದೆ. ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ" ಎಂದು ಎಸ್​ಪಿ ಅಡ್ಡೂರು ಶ್ರೀನಿವಾಸಲು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಮಣಿಕಂಠ ರಾಠೋಡ್​ ಮೇಲೆ ದಾಳಿಯೇ ನಡೆದಿಲ್ಲ: ಎಸ್​ಪಿ ಅಡ್ಡೂರು ಶ್ರೀನಿವಾಸುಲು ಸ್ಪಷ್ಟನೆ

Last Updated : Dec 7, 2023, 8:05 PM IST

ABOUT THE AUTHOR

...view details