ಕಲಬುರಗಿ:ಜಿಲ್ಲೆಯ ಕಮಲಾಪುರ ತಾಲೂಕಿನ ಮರಮಂಚಿ ತಾಂಡಾದ ಜನರು ಕೊರೊನಾ ವಾರಿಯರ್ಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಕಲಬುರಗಿ: ಸೋಂಕಿತರನ್ನು ಕರೆ ತರಲು ಹೋದ ಕೊರೊನಾ ವಾರಿಯರ್ಸ್ ಮೇಲೆ ಕಲ್ಲು ತೂರಾಟ! - kalaburagi news
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಮಂಚಿ ತಾಂಡಾದ ಕೊರೊನಾ ಸೋಂಕಿತರನ್ನ ಕೋವಿಡ್-19 ಆಸ್ಪತ್ರೆಗೆ ಕರೆ ತರಲು ಹೋದ ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ತಾಂಡಾದ ಜನರು ಕಲ್ಲು ತೂರಾಟ ನಡೆಸಿದ್ದಾರೆ.
ಮರಮಂಚಿ ತಾಂಡಾಕ್ಕೆ ಮಹಾರಾಷ್ಟ್ರದಿಂದ ವಾಪಸ್ ಬಂದಿದ್ದ 15 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಈ ಹಿನ್ನೆಲೆ ಸೋಂಕಿತರನ್ನ ಕೋವಿಡ್-19 ಆಸ್ಪತ್ರೆಗೆ ಕರೆ ತರಲು ಆರೋಗ್ಯ ಇಲಾಖೆ ಸಿಬ್ಬಂದಿ ಆ್ಯಂಬುಲೆನ್ಸ್ನಲ್ಲಿ ತೆರಳಿದ್ದರು. ಈ ವೇಳೆ ತಾಂಡಾದ ನಿವಾಸಿಗಳು ಏಕಾಏಕಿ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು, ಆರೋಗ್ಯ ಸಿಬ್ಬಂದಿ ವಾಹನ ಬಿಟ್ಟು ಓಡಿ ಹೋಗಿದ್ದಾರೆ. ಆ್ಯಂಬುಲೆನ್ಸ್ನ ಗಾಜುಗಳು ಪುಡಿ-ಪುಡಿಯಾಗಿವೆ.
ಅಷ್ಟೇ ಅಲ್ಲದೆ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಸಿಬ್ಬಂದಿ ಮೇಲೆಯೂ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಎಸ್ಪಿ ಭೇಟಿ ನೀಡಿ, ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.