ಕಲಬುರಗಿ:ಪೌರತ್ವ ತಿದ್ದುಪಡಿ ಕಾಯ್ದೆ ( ಸಿಎಎ), ಎನ್ಆರ್ಸಿ, ಎನ್ಪಿಆರ್ ವಿರೋಧಿಸಿ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಸಿಎಎ ವಿರೋಧಿಸಿ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ - ಕಲಬುರಗಿ ಬೃಹತ್ ಪ್ರತಿಭಟನಾ ಮೆರವಣಿಗೆ
ಪೌರತ್ವ ತಿದ್ದುಪಡಿ ಕಾಯ್ದೆ ( ಸಿಎಎ), ಎನ್ಆರ್ಸಿ, ಎನ್ಪಿಆರ್ ವಿರೋಧಿಸಿ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಜನಾಂದೋಲನ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಯ ಮುಖಂಡರು, ಮಠಾಧೀಶರು, ಜನಪ್ರತಿನಿಧಿಗಳು ಭಾಗವಹಿಸಿ ಬೆಂಬಲಿಸಿದರು. ನಗರೇಶ್ವರ ಶಾಲೆಯಿಂದ ಆರಂಭಗೊಂಡ ಬೃಹತ್ ಪ್ರತಿಭಟನಾ ಮೆರವಣಿಗೆಯು ಜಗತ್ ವೃತ್ತದಲ್ಲಿ ಸಮಾವೇಶಗೊಂಡಿತು. ಸಮಾವೇಶದಲ್ಲಿ ಪೌರತ್ವ ಕಾಯ್ದೆ ಸೇರಿದಂತೆ ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ಆರ್ಥಿಕ ಹಿಂಜರಿತ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಸೇರಿದಂತೆ ಜ್ವಲಂತ ಸಮಸ್ಯೆಗಳು ಕುರಿತು ಸಮಾಲೋಚಿಸಲಾಯಿತು. ಸಂವಿಧಾನದ ಆಶಯಗಳಿಗೆ ವಿರುದ್ಧವಾದ ಪೌರತ್ವ ಕಾಯ್ದೆ ಜಾರಿ ಮಾಡುವುದನ್ನು ಕೇಂದ್ರ ಸರ್ಕಾರ ಈ ಕೂಡಲೇ ಕೈ ಬಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.