ಕಲಬುರಗಿ: ಹೈದರಾಬಾದ್ ಕರ್ನಾಟಕ (ಕಲ್ಯಾಣ ಕರ್ನಾಟಕ) ಭಾಗದ ಸ್ವಾತಂತ್ರ್ಯದ ರೂವಾರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಜಯಂತಿಯನ್ನು ಮುಂಬರುವ ವರ್ಷದಿಂದ ಸರ್ಕಾರವೇ ಆಚರಿಸಬೇಕು ಎಂದು ಹೈದರಾಬಾದ್ ಕರ್ನಾಟಕ ಜನಪರ ಸಂಘರ್ಷ ಸಮಿತಿ ಅಧ್ಯಕ್ಷ ಲಕ್ಷ್ಮಣ ದಸ್ತಿ ಆಗ್ರಹಿಸಿದ್ದಾರೆ.
ಮುಂಬರುವ ವರ್ಷದಿಂದ ಸರ್ದಾರ್ ಪಟೇಲ್ ಜಯಂತಿಯನ್ನ ಸರ್ಕಾರವೇ ಆಚರಿಸಲಿ: ಲಕ್ಷ್ಮಣ ದಸ್ತಿ - Hyderabad Karnataka Janapara Samithi Committee president Laxmana Dasti
ಹೈದರಾಬಾದ್ ಕರ್ನಾಟಕ ಜನಪರ ಸಂಘರ್ಷ ಸಮಿತಿ ನೇತೃತ್ವದಲ್ಲಿ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಪಟೇಲರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಜಯಂತ್ಯುತ್ಸವ ಆಚರಣೆ ಮಾಡಲಾಯಿತು.
ಸರ್ದಾರ್ ವಲ್ಲಭಭಾಯಿ ಪಟೇಲ್ ಜಯಂತಿ
ಹೈದರಾಬಾದ್ ಕರ್ನಾಟಕ ಜನಪರ ಸಂಘರ್ಷ ಸಮಿತಿ ನೇತೃತ್ವದಲ್ಲಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಪಟೇಲರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಜಯಂತ್ಯುತ್ಸವ ಆಚರಣೆ ಮಾಡಲಾಯಿತು.
ಕಲ್ಯಾಣ ಕರ್ನಾಟಕದ ವಿವಿಧೆಡೆ ಹಲವು ಸಂಘ ಸಂಸ್ಥೆಗಳಿಂದ ಪಟೇಲರ ಜಯಂತಿ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿತ್ತು. ಆದರೆ, ಕೋವಿಡ್ ಕಾರಣದಿಂದಾಗಿ ಈ ಬಾರಿ ಸರಳವಾಗಿ ಜಯಂತಿ ಆಚರಿಸಲಾಯಿತು.