ಕಲಬುರಗಿ:ಪ್ರತ್ಯೇಕ ಲಿಂಗಾಯತ ಧರ್ಮ ವಿರೋಧಿ ಹೋರಾಟದ ನೇತೃತ್ವ ವಹಿಸಿದ್ದ ತಾಲೂಕಿನ ಶ್ರೀನಿವಾಸ ಸರಡಗಿಯಶ್ರೀಗುರು ಚಿಕ್ಕವೀರೇಂದ್ರ ಸಂಸ್ಥಾನ ಮಠದ ರೇವಣಸಿದ್ಧ ಶಿವಾಚಾರ್ಯರು ಇಂದು ಮಹತ್ವದ ರಾಜಕೀಯ ಭವಿಷ್ಯ ನುಡಿದಿದ್ದಾರೆ.
ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿಯನ್ನು ಗೃಹ ಸಚಿವ ಎಂ. ಬಿ. ಪಾಟೀಲ್ ಭೇಟಿಯಾಗಿದ್ದರು. ಚಿಂಚೋಳಿ ಪ್ರಚಾರಕ್ಕೆಂದು ಆಗಮಿಸಿದ್ದ ಅವರು ಇನ್ನು ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ರೇವಣಸಿದ್ದ ಶ್ರೀಗಳನ್ನು ಪಾಟೀಲ್ ಭೇಟಿಯಾಗಿರುವುದು ರಾಜಕೀಯ ವಲಯದಲ್ಲೂ ಕುತೂಹಲ ಮೂಡಿಸಿದೆ.
ಭೇಟಿ ಸಮಯದಲ್ಲಿ ಮಾತನಾಡಿದ ಶ್ರೀಗಳು, ಸಮ್ಮಿಶ್ರ ಸರ್ಕಾರ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿದೆ. ಇನ್ನುಳಿದ ಸಮುದಾಯದವರನ್ನು ಕಡೆಗಣನೆ ಮಾಡಲಾಗಿದೆ. ಲೋಕಸಭಾ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಸರ್ಕಾರ ಬದಲಾವಣೆ ಖಚಿತ. ಗೃಹ ಸಚಿವರಾಗಿರುವ ಎಂ ಬಿ ಪಾಟೀಲ್ ಅವರೇ ಮುಖ್ಯಮಂತ್ರಿಯಾಗೋ ಸಾಧ್ಯತೆಯಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಇದೇ ವೇಳೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ರೇವಣಸಿದ್ಧ ಶಿವಾಚಾರ್ಯರನ್ನುಎಂ ಬಿ ಪಾಟೀಲರು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮತ್ತೊಂದೆಡೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸಹ ವೀರಶೈವ ಮಠಾಧೀಶರನ್ನು ಭೇಟಿ ಮಾಡಿದ್ದಾರೆ. ಸುಲೇಪೇಟೆ ಕಟ್ಟಂಗೇಶ್ವರ ಮಠದಲ್ಲಿ ಕಲಬುರಗಿ, ಬೀದರ್ ವೀರಶೈವ ಮಠಾಧೀಶರನ್ನು ಭೇಟಿಯಾಗಿರೋ ಖಂಡ್ರೆ, ಉಪ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೋರಿದ್ದಾರೆ.