ಕಲಬುರಗಿ :ಜಿಲ್ಲೆಯ ಎಲ್ಲಾ ನ್ಯಾಯಾಧೀಶರು, ನ್ಯಾಯವಾದಿಗಳು ಹಾಗೂ ಕಕ್ಷಿದಾರರ ಸಹಕಾರದಿಂದ ಏರ್ಪಡಿಸಲಾಗಿದ್ದ ಮೆಗಾ ಲೋಕ್ ಅದಾಲತ್‍ನಲ್ಲಿ ಸಿವಿಲ್ ದಾವೆಗಳು, ಮೋಟಾರು ವಾಹನ, ಅಪಘಾತ ಪರಿಹಾರ ಪ್ರಕರಣಗಳು, ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು, ಭೂಸ್ವಾಧೀನ ಪರಿಹಾರ ವಸೂಲಾತಿ ಪ್ರಕರಣಗಳು, ಬ್ಯಾಂಕ್ಗಳಿಗೆ ಸಂಬಂಧಿಸಿದಂತೆ ಒಟ್ಟು 21,756 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.
ಕಲಬುರಗಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮೆಗಾ ಲೋಕ್ ಅದಾಲತ್ ಜರುಗಿದ್ದು, ಕಕ್ಷಿದಾರರು, ನ್ಯಾಯಾಧೀಶರು, ಸಂಧಾನಕಾರರು ಹಾಗೂ ಸಂಬಂಧಪಟ್ಟ ನ್ಯಾಯವಾದಿಗಳು ರಾಜಿ ಸಂಧಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.