ಕಲಬುರಗಿ:ನಾಪತ್ತೆಯಾಗಿದ್ದ ಯುವಕ ಭೀಮಾ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಚಿತ್ತಾಪುರ ತಾಲೂಕಿನ ಕುಂದನೂರು ಗ್ರಾಮದ ಬಳಿ ನಡೆದಿದೆ.
ಕುಂದನೂರು ಗ್ರಾಮದ ರಫೀಕ್ (27) ಮೃತ ಯುವಕ. ಕಳೆದ ಐದು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಈತ ಇಂದು ಶವವಾಗಿ ಪತ್ತೆಯಾಗಿದ್ದಾನೆ.

ಭೀಮಾ ನದಿಯಲ್ಲಿ ಶವವೊಂದು ತೇಲುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದಾಗ ಇದು ನಾಪತ್ತೆಯಾಗಿದ್ದ ಯುವಕನ ಮೃತದೇಹವಾಗಿದೆ ಎಂದು ಪತ್ತೆ ಹಚ್ಚಿದ್ದಾರೆ.
ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.