ಕಲಬುರಗಿ:ಮಹಾರಾಷ್ಟ್ರದ ಮುಂಬೈನಿಂದ ಬಂದ ಸಾವಿರಾರು ವಲಸೆ ಕಾರ್ಮಿಕರು ಆಳಂದ ತಾಲೂಕಿನ ಹಿರೊಳ್ಳಿ ಚೆಕ್ ಪೋಸ್ಟ್ ಬಳಿ ಜಿಲ್ಲೆಗೆ ಪ್ರವೇಶಿಸಲು ಅನುಮತಿಗಾಗಿ ಮುಗಿಬಿದ್ದಿದ್ದಾರೆ.
ಕಲಬುರಗಿ ಜಿಲ್ಲೆ ಪ್ರವೇಶಿಸಲು ಅನುಮತಿಗಾಗಿ ಮುಗಿಬಿದ್ದ ಸಾವಿರಾರು ವಲಸೆ ಕಾರ್ಮಿಕರು! - ಆಳಂದ ತಾಲೂಕು ಹಿರೊಳ್ಳಿ ಚೆಕ್ಪೊಸ್ಟ್
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಹಿರೊಳ್ಳಿ ಚೆಕ್ ಪೋಸ್ಟ್ ಬಳಿ ಜಿಲ್ಲೆಗೆ ಪ್ರವೇಶಿಸಲು ಅನುಮತಿಗಾಗಿ ಮುಂಬೈನಿಂದ ಬಂದ ಸಾವಿರಾರು ವಲಸೆ ಕಾರ್ಮಿಕರು ಮುಗಿಬಿದ್ದಿದ್ದು, ಜಿಲ್ಲೆಯ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ.
ಕಲಬುರಗಿ ಜಿಲ್ಲೆ ಪ್ರವೇಶಿಸಲು ಅನುಮತಿಗಾಗಿ ಮುಗಿಬಿದ್ದ ವಲಸೆ ಕಾರ್ಮಿಕರು
ಹೇಗಾದರೂ ಮಾಡಿ ತಮ್ಮೂರಿಗೆ ಸೇರುವ ತವಕದಲ್ಲಿರುವ ಕಾರ್ಮಿಕರು, ಜಿಲ್ಲೆಗೆ ಪ್ರವೇಶಿಸಲು ಅನುಮತಿಗಾಗಿ ಸಾಮಾಜಿಕ ಅಂತರವಿಲ್ಲದೆ ಹಾಗೂ ಮಾಸ್ಕ್ ಧರಿಸದೆ ಒಬ್ಬರ ಮೇಲೊಬ್ಬರು ಮುಗಿಬೀಳುತ್ತಿದ್ದಾರೆ. ಈ ಹಿಂದೆ ಮಹಾರಾಷ್ಟ್ರದಿಂದ ವಾಪಸ್ ಬಂದಿರುವ 41 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಿರುವಾಗ ಇನ್ನೂ ಸಾವಿರಾರು ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ಕಲಬುರಗಿ ಪ್ರವೇಶಿಸಲು ಮುಗಿಬಿದ್ದಿರುವುದು ಜಿಲ್ಲೆಯ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ.