ಕಲಬುರಗಿ: ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಕಲಬುರಗಿ ಸಿಟಿ ರೌಂಡ್ಸ್ ನಡೆಸಿ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಮಹಾನಗರ ಪಾಲಿಕೆಯಿಂದ ನಡೆಯುತ್ತಿರುವ ರಸ್ತೆ, ಚರಂಡಿ, ಫುಟ್‌ಪಾತ್ ಹೀಗೆ ಅಭಿವೃದ್ಧಿ ಕಾಮಗಾರಿಗಳ ವೀಕ್ಷಿಸಿದ ಸಚಿವರು, ಜನರಿಗೆ ಅನುಕೂಲವಾಗುವಂತೆ ಗುಣಮಟ್ಟದ ಕೆಲಸ ಮಾಡುವಂತೆ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ ಅವಗೆ ಸೂಚನೆ ನೀಡಿದರು.