ಕಲಬುರಗಿ :ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ರಾಜ್ಯದಲ್ಲಿ 26ನೇ ಸ್ಥಾನದಿಂದ ಕಲಬುರಗಿ ಈಗ 16 ನೇ ಸ್ಥಾನಕ್ಕೆ ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲಬುರಗಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತಿದೆ. ಪ್ರತಿನಿತ್ಯ 35 ಕೆಎಲ್‌ನಷ್ಟು ಆಕ್ಸಿಜನ್ ಪೂರೈಕೆ ಆಗುತ್ತಿದೆ. ಸದ್ಯ ಸರ್ಕಾರಿ ಆಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ರೆಮ್ಡಿಸಿವಿರ್ ಇಂಜೆಕ್ಷನ್ ಕೊರತೆಯಾಗುತ್ತಿಲ್ಲ.
ಕಾಳಸಂತೆಯಲ್ಲಿ ರೆಮ್ಡಿಸಿವಿರ್ ಇಂಜೆಕ್ಷನ್ ಮಾರಾಟಕ್ಕೆ ಕಂಪ್ಲೀಟ್ ಬ್ರೇಕ್ ಹಾಕಾಲಾಗಿದೆ. ರೆಮ್ಡಿಸಿವಿರ್ ಇಂಜೆಕ್ಷನ್ ರೋಗಿಯ ಮುಂದೆಯೇ ಓಪನ್ ಮಾಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.