ಕಲಬುರಗಿ: ರಾಜ್ಯದಲ್ಲಿ ಸಿಎಂ ಬಿಎಸ್‌ವೈ ಸುದ್ದಿ ಸದ್ದು ಮಾಡ್ತಿರುವ ಈ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಹಲವರ ಹೆಸರುಗಳು ಕೇಳಿಬರುತ್ತಿವೆ. ಈ ಕುರಿತಂತೆ ತಾವು ಲಾಬಿ ಮಾಡುತ್ತಿಲ್ಲ, ರಾಷ್ಟ್ರಿಯ ನಾಯಕರು ಅಳೆದು ತೂಗಿ ಅರ್ಹರನ್ನು ಸಿಎಂ ಮಾಡುತ್ತಾರೆ ಅಂತಾ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದ 120 ಜನ ಶಾಸಕರೆಲ್ಲರೂ ಸಿಎಂ ಹುದ್ದೆಗೆ ಅರ್ಹತೆ ಹೊಂದಿದ್ದಾರೆ. ನಿರೀಕ್ಷೆಯಿಲ್ಲದೆ ಪಕ್ಷ ನನಗೆ ಹಲವು ಜವಾಬ್ದಾರಿ ನೀಡಿದೆ. ಮೊದಲ ಬಾರಿ ಶಾಸಕನಾದಾಗಲೇ ಹೈಕಮಾಂಡ್ ನನ್ನನ್ನು ಸಚಿವನನ್ನಾಗಿ ಮಾಡಿದೆ. ಈಗಲು ಮಹತ್ವದ ಜವಾಬ್ದಾರಿ ಕೊಟ್ಟಿದೆ. ಹಿಂದೆಯೂ ನಾನು ಯಾವುದೇ ಹುದ್ದೆ ಅಪೇಕ್ಷೆ ಮಾಡಿದವನಲ್ಲ, ಈಗಲೂ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ :ವರುಣಾರ್ಭಟಕ್ಕೆ ಉತ್ತರ ಕರ್ನಾಟಕ ತತ್ತರ: ನಾಳೆ ಮುಖ್ಯಮಂತ್ರಿಯಿಂದ ಪರಿಸ್ಥಿತಿ ಅವಲೋಕನ
ದೇವಸ್ಥಾನಕ್ಕೆ ಹೋಗಿ ಬಂದರೆ ನೆಮ್ಮದಿ!
ಸಾಮಾನ್ಯವಾಗಿ ತಿಂಗಳು - ಎರಡು ತಿಂಗಳಿಗೊಮ್ಮೆ ದೇವಸ್ಥಾನಕ್ಕೆ ಹೋಗಿ ಬಂದರೆ ಸಮಾಧಾನ ಆಗುತ್ತೆ. ಅದೇ ಕಾರಣಕ್ಕೆ ನಾನು ವಾರಣಾಸಿಗೆ ಹೋಗಿದ್ದೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಜನ ವೋಟು ಹಾಕಿ ಕಳಿಸಿದ್ದಾರೆ. ಜನರ ನಿರೀಕ್ಷೆಯಂತೆ ಕೆಲಸ ಮಾಡುವುದೊಂದೇ ನನ್ನ ಮೂಲ ಉದ್ದೇಶ ಎಂದರು.