ಕರ್ನಾಟಕ

karnataka

ETV Bharat / state

ನನ್ನನ್ನು ಸಂಪುಟದಿಂದ ಕೈಬಿಡಲ್ಲ ಎಂಬ ವಿಶ್ವಾಸವಿದೆ: ಸಚಿವೆ ಶಶಿಕಲಾ ಜೊಲ್ಲೆ - ಸಂಪುಟ ವಿಸ್ತರಣೆ

ಈ ಮೊದಲೂ ಸಹ ನನ್ನನ್ನು ಸಂಪುಟದಿಂದ ಕೈಬಿಡಲಾಗುತ್ತದೆ ಎಂದು ಮಾಧ್ಯಮಗಳು ಹೇಳಿದ್ದವು. ಆದರೆ ಆಗಲೂ ಸಿಎಂ ನನ್ನನ್ನು ಸಂಪುಟದಿಂದ ಕೈಬಿಟ್ಟಿರಲಿಲ್ಲ, ಈ ಬಾರಿಯೂ ನನ್ನನ್ನು ಮುಂದುವರೆಸುತ್ತಾರೆಂಬ ವಿಶ್ವಾಸ ನನಗಿದೆ ಎಂದಿದ್ದಾರೆ.

Minister Shashikala jolle
ಸಚಿವೆ ಶಶಿಕಲಾ ಜೊಲ್ಲೆ

By

Published : Jan 11, 2021, 7:53 PM IST

ಕಲಬುರಗಿ: ಸಚಿವ ಸಂಪುಟ ವಿಸ್ತರಣೆ ಸ್ವಾಭಾವಿಕ, ಅದನ್ನು ಸಿಎಂ ಯಡಿಯೂರಪ್ಪ ಅವರು ಮತ್ತೆ ಮಾಡುತ್ತಿದ್ದಾರೆ. ಈ ನಡುವೆ ನನ್ನನ್ನು ಸಂಪುಟದಿಂದ ಕೈಬಿಡುತ್ತಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಇದುವರೆಗೆ ಅಂತಹ ಯಾವುದೇ ಮುನ್ಸೂಚನೆ ಸಿಕ್ಕಿಲ್ಲ, ಸಿಎಂ ಯಡಿಯುರಪ್ಪ ನನ್ನನ್ನು ಮುಂದುವರೆಸುತ್ತಾರೆ ಅನ್ನೋ ವಿಶ್ವಾಸವಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಸಂಪುಟ ವಿಸ್ತರಣೆ ಕುರಿತು ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ

ಕಲಬುರಗಿ ನಗರದಲ್ಲಿ ನಡೆದ ಜನಸೇವಕ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಮಾಧ್ಯಮದೊಂದಿಗೆ ಮಾತನಾಡಿ, ಒಂದು ವೇಳೆ ಪಕ್ಷ ಯಾವುದೇ ರೀತಿಯ ಕ್ರಮ ಕೈಗೊಂಡರೂ ನಾನು ಪಕ್ಷದ ನಿರ್ಧಾರಕ್ಕೆ ಬದ್ಧವಾಗಿದ್ದೇನೆ. ಸಾಮಾನ್ಯ ಕಾರ್ಯಕರ್ತಳಾಗಿ ಬೆಳೆದು ಬಂದವಳು. ಮುಂದೆಯೂ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಮುಂದುವರೆಯುತ್ತೇನೆ ಎಂದರು.

ಇದನ್ನೂ ಓದಿ:ನನಗೆ ಸಚಿವ ಸ್ಥಾನ ನೀಡಿಲ್ಲ ಎಂಬುವುದು ಬೇಸರ, ನಾನೂ ಸಚಿವ ಸ್ಥಾನದ ಆಕಾಂಕ್ಷಿ.. ಕುಮಟಳ್ಳಿ

ABOUT THE AUTHOR

...view details