ಕರ್ನಾಟಕ

karnataka

ETV Bharat / state

ದೊಡ್ದ ಪ್ರಮಾಣದಲ್ಲಿ ಲಸಿಕೆ ಲಭ್ಯವಿಲ್ಲ .. ಅಭಿಯಾನಕ್ಕೆ ಸಾಂಕೇತಿಕ ಚಾಲನೆ : ಸಚಿವ ಸುಧಾಕರ್

ರಾಜ್ಯದಲ್ಲಿ ಇಂದು ಸಿಎಂ ಸಾಂಕೇತಿಕವಾಗಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಎರಡು ಕೋಟಿ ಲಸಿಕೆಗೆ ಈಗಾಗಲೇ ಆರ್ಡರ್ ಮಾಡಿದ್ದೇವೆ. ಕಂಪನಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಲಸಿಕೆ ಯಾವಾಗ ಬರುತ್ತವೆ ಎನ್ನುವುದರ ನಿರ್ದಿಷ್ಟ ಮಾಹಿತಿ ಇಲ್ಲ. ಡೋಸ್ ಬಂದ ನಂತರ ದೊಡ್ಡ ಪ್ರಮಾಣದಲ್ಲಿ ಲಸಿಕಾ ಅಭಿಯಾನ ಶುರುವಾಗಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ
ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ

By

Published : May 1, 2021, 12:02 PM IST

Updated : May 1, 2021, 12:44 PM IST

ಕಲಬುರಗಿ:18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಇಂದಿನಿಂದ ಲಸಿಕೆ ನೀಡುವ ಅಭಿಯಾನಕ್ಕೆ ಸಾಂಕೇತಿಕವಾಗಿ ಇಂದು ಚಾಲನೆ ಸಿಕ್ಕಿದೆ. ಆದರೆ ದೊಡ್ಡ ಪ್ರಮಾಣದಲ್ಲಿ ಇದನ್ನು ಪ್ರಾರಂಭಿಸಲು ಇನ್ನೂ ಕಾಲಾವಕಾಶ ಬೇಕು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇಂದು ಸಿಎಂ ಸಾಂಕೇತಿಕವಾಗಿ ಚಾಲನೆ ನೀಡಿದ್ದಾರೆ. ಎರಡು ಕೋಟಿ ಲಸಿಕೆಗೆ ಈಗಾಗಲೇ ಆರ್ಡರ್ ಮಾಡಿದ್ದೇವೆ. ಕಂಪನಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಲಸಿಕೆ ಯಾವಾಗ ಬರುತ್ತವೆ ಎನ್ನುವುದರ ನಿರ್ದಿಷ್ಟ ಮಾಹಿತಿ ಇಲ್ಲ. ಡೋಸ್ ಬಂದ ನಂತರ ದೊಡ್ಡ ಪ್ರಮಾಣದಲ್ಲಿ ಲಸಿಕಾ ಅಭಿಯಾನ ಶುರುವಾಗಲಿದೆ ಎಂದರು.

ಸದ್ಯ 6 ಲಕ್ಷ ಡೋಸ್ ಅಗತ್ಯವಿದ್ದು, ನಮ್ಮಲ್ಲಿ 3 ಲಕ್ಷ ಡೋಸ್​​ ಮಾತ್ರ ಇವೆ. ಇದರಿಂದ ದೊಡ್ಡ ಮಟ್ಟದಲ್ಲಿ ವಿತರಣೆ ಆಗುವುದಿಲ್ಲ. ಕಂಪನಿಗಳು ಸರಬರಾಜು ಮಾಡಿದ ಮೇಲೆ ದೊಡ್ಡ ಪ್ರಮಾಣದಲ್ಲಿ 18 ವರ್ಷದ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಓದಿ : ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ, ಜಾಗೃತರಾಗಿರಿ.. ಈ ಲಕ್ಷಣಗಳು ಕಂಡುಬಂದ್ರೆ ತಕ್ಷಣ ಎಚ್ಚೆತ್ತುಕೊಳ್ಳಿ

Last Updated : May 1, 2021, 12:44 PM IST

ABOUT THE AUTHOR

...view details