ಕಲಬುರಗಿ :ಅಮಿತ್ ಶಾ ನಮ್ಮ ಪರಮೋಚ್ಛ ನಾಯಕರು. ಅವರ ಹೇಳಿಕೆಗಳೇ ಪ್ರಸ್ತುತ. ಉಳಿದವರದು ಅಪ್ರಸ್ತುತ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.
ಗೃಹ ಸಚಿವ ಅಮಿತ್ ಶಾ ಹೇಳಿಕೆ ಸಮರ್ಥಿಸಿದ ಇಂಧನ ಸಚಿವ ವಿ ಸುನೀಲ್ ಕುಮಾರ್ ನಗರದಲ್ಲಿ ಈ ಕುರಿತು ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಮುಂದಿನ ಚುನಾವಣೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಎಂಬ ಅಮಿತ್ ಶಾ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದರು.
ಲಂಚ ಪಡೆದ ಅಧಿಕಾರಿಗಳ ವಿರುದ್ಧ 24 ಗಂಟೆಯಲ್ಲಿ ಕ್ರಮ
ಕೆಟ್ಟ ಟ್ರಾನ್ಸ್ಫಾರ್ಮರ್ ಅಳವಡಿಕೆಗೆ ಅಧಿಕಾರಿಗಳು ಲಂಚ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂಬ ದೂರು ಬಂದಿವೆ. ರೈತರು ನಿರ್ದಿಷ್ಟವಾದ ದೂರು ನೀಡಿದರೆ ಅಧಿಕಾರಿಗಳ ವಿರುದ್ಧ 24 ಗಂಟೆಯಲ್ಲಿ ಕ್ರಮ ಕೈಗೊಳಲಾಗುವುದು ಎಂದರು.
ಓದಿ :ರಾಷ್ಟ್ರೀಯ ಉದ್ಯಾನದ ಹೆಸರು ಬದಲಾವಣೆ ಸಮರ್ಥಿಸಿಕೊಂಡ ಸಂಸದ ಪ್ರತಾಪ್ ಸಿಂಹ