ಕಲಬುರಗಿ:ಕೇಂದ್ರ ಸರ್ಕಾರ ತಳವಾರ, ಪರಿವಾರದವರಿಗೆ ಎಸ್ಟಿ ಪ್ರಮಾಣ ಪತ್ರ ನೀಡಲು ಆದೇಶಿಸಿದ್ದರೂ ರಾಜ್ಯ ಸರ್ಕಾರ ಮಾತ್ರ ಅನ್ಯಾಯ ಮಾಡುತ್ತಿದೆ ಎಂದು ಅಫಜಲಪುರ ಶಾಸಕ ಎಂ.ವೈ. ಪಾಟೀಲ ಆರೋಪಿಸಿದ್ದಾರೆ.
ಎಸ್ಟಿ ಪ್ರಮಾಣ ಪತ್ರ ನೀಡಲು ವಿಳಂಬ; ಎಂ.ವೈ. ಪಾಟೀಲ ಆಕ್ರೋಶ
ತಳವಾರ, ಪರಿವಾರದವರಿಗೆ ಎಸ್ಟಿ ಪ್ರಮಾಣ ಪತ್ರ ನೀಡದೇ ರಾಜ್ಯ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಅಫಜಲಪುರ ಶಾಸಕ ಎಂ.ವೈ. ಪಾಟೀಲ ಆಕ್ರೋಶ ಹೊರಹಾಕಿದ್ದಾರೆ.
ಶಾಸಕ ಎಂ.ವೈ.ಪಾಟೀಲ
ಕಲಬುರಗಿಯಲ್ಲಿ ಮಾತನಾಡಿದ ಅವರು, ತಳವಾರ, ಪರಿವಾರ ಜನಾಂಗ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರ ಸೇರಿ ಎಲ್ಲ ರಂಗದಲ್ಲಿಯೂ ಹಿಂದುಳಿದಿದೆ. ಮೂರು ದಶಕಗಳಿಂದ ಎಸ್ಟಿ ಪಟ್ಟಿ ಸೇರ್ಪಡೆಗಾಗಿ ಹೋರಾಟ ಮಾಡಲಾಗಿತ್ತು. ಕೇಂದ್ರ ಸರ್ಕಾರ ಕೊನೆಗೂ ಎಸ್ಟಿಗೆ ಸೇರ್ಪಡೆ ಮಾಡಿ ಆದೇಶಿಸಿದೆ. ಆದರೆ ರಾಜ್ಯದಲ್ಲಿ ಅಧಿಕಾರಿಗಳು ಮಾತ್ರ ಎಸ್ಟಿ ಪ್ರಮಾಣ ಪತ್ರ ನೀಡದೆ, ವಿನಾಕಾರಣ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.