ಕಲಬುರ್ಗಿ :ಅಕ್ರಮ ಮರಳುಗಾರಿಕೆ ತಡೆಯಲು ಸ್ವತಃ ಶಾಸಕ ಪ್ರಿಯಾಂಕ್ ಖರ್ಗೆ ಅವರೇ ಫೀಲ್ಡಿಗಿಳಿಯುವ ಮೂಲಕ ಅಕ್ರಮ ಚಟುವಟಿಕೆಗಳನ್ನು ತಡೆ ಹಿಡಿಯಲು ಮುಂದಾಗಿದ್ದರು.
ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ನಡೆಯುತ್ತಿರುವ ಕುರಿತು ಸಾಕಷ್ಟು ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಸ್ವತಃ ಶಾಸಕ ಪ್ರೀಯಾಂಕ್ ಖರ್ಗೆ ಮುಂದಾಗಿದ್ದು, ಜಿಲ್ಲೆಯ ಚಿತ್ತಾಪುರ ತಾಲೂಕಿನ ಕಾಟಮದೇವರಹಳ್ಳಿ ಬಳಿ ಕಾಗಿನ ನದಿಯಿಂದ ತೆಗೆದು ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಮರಳು ಅಡ್ಡೆ ಮೇಲೆ ಶಾಸಕರು, ದಾಳಿ ನಡೆಸಿ ಮರಳನ್ನು ವಶಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.