ಕಲಬುರಗಿ: ಎಪಿಎಂಸಿ, ಭೂಸುಧಾರಣೆ ಹಾಗೂ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಬಂಡವಾಳಶಾಹಿ ಭಯೋತ್ಪಾದನೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಪಿಎಂಸಿ, ಭೂಸುಧಾರಣೆ ಕಾಯ್ದೆಗಳ ತಿದ್ದುಪಡಿ ಬಂಡವಾಳಶಾಹಿ ಭಯೋತ್ಪಾದನೆ: ಶಾಸಕ ಪ್ರಿಯಾಂಕ್ ಖರ್ಗೆ - ಎಪಿಎಂಸಿ, ಭೂಸುಧಾರಣೆ ಕಾಯ್ದೆಗಳ ತಿದ್ದುಪಡಿ ಬಂಡವಾಳಶಾಹಿ ಭಯೋತ್ಪಾದನೆ
ಎಪಿಎಂಸಿ, ಭೂಸುಧಾರಣೆ ಹಾಗೂ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಬಂಡವಾಳಶಾಹಿ ಭಯೋತ್ಪಾದನೆಯಾಗಿದ್ದು, ಬಡವರ ಮೇಲಿನ ಪರೋಕ್ಷ ಯುದ್ಧ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಶಾಸಕ ಪ್ರಿಯಾಂಕ್ ಖರ್ಗೆ
ಕಾಯ್ದೆ ಖಂಡಿಸಿ ಟ್ವೀಟ್ ಮಾಡಿರುವ ಶಾಸಕ ಖರ್ಗೆ, ಎಪಿಎಂಸಿ, ಭೂಸುಧಾರಣೆ ಹಾಗೂ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಬಡವರ ಮೇಲಿನ ಪರೋಕ್ಷ ಯುದ್ಧ ಎಂದು ಕಿಡಿಕಾರಿದ್ದಾರೆ.
ಇಡೀ ವ್ಯವಸ್ಥೆಯನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡ ಬಂಡವಾಳಶಾಹಿಗಳು ತಮ್ಮ ಹಿತಸಾಧನೆಗೆ ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.