ಕಲಬುರಗಿ: ಹೊರ ರಾಜ್ಯಗಳಲ್ಲಿರುವ ವಲಸೆ ಕಾರ್ಮಿಕರನ್ನು ಕರೆ ತರಲು ರೈಲು ವ್ಯವಸ್ಥೆ ಮಾಡಲಿ, ವೆಚ್ಚ ಕಾಂಗ್ರೆಸ್ ಭರಿಸಲಿದೆ ಎಂದು ಸಿಎಂಗೆ ಶಾಸಕ ಪ್ರಿಯಾಂಕ್ ಖರ್ಗೆ ಒತ್ತಡ ಹೇರಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿರುವ ವಲಸೆ ಕಾರ್ಮಿಕರನ್ನು ವಾಪಸ್ ಕರೆಸಿಕೊಳ್ಳುವಲ್ಲಿ ನಿರ್ಲಕ್ಷ್ಯ ತೋರುತ್ತಿವೆ. ಗೋವಾ, ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಲ್ಲಿ ಸಿಲುಕಿರುವ ಕಾರ್ಮಿಕರನ್ನು ವಿಶೇಷ ರೈಲಿನ ಮೂಲಕ ಕರೆ ತರಬೇಕು. ಅದಕ್ಕೆ ತಗುಲುವ ವೆಚ್ಚವನ್ನು ಕಾಂಗ್ರೆಸ್ ಪಕ್ಷ ಭರಿಸಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ವಲಸೆ ಕಾರ್ಮಿಕರನ್ನು ಕರೆ ತರಲು ವಿಶೇಷ ರೈಲು ವ್ಯವಸ್ಥೆ ಕಲ್ಪಿಸಿ: ಪ್ರಿಯಾಂಕ್ ಖರ್ಗೆ - ಸರ್ಕಾರಕ್ಕೆ ಶಾಸಕ ಪ್ರಿಯಾಂಕ್ ಮನವಿ
ಗೋವಾ, ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಲ್ಲಿ ಸಿಲುಕಿರುವ ಕಾರ್ಮಿಕರನ್ನು ವಿಶೇಷ ರೈಲಿನ ಮೂಲಕ ಕರೆ ತರಬೇಕು. ಅದಕ್ಕೆ ತಗುಲುವ ವೆಚ್ಚವನ್ನು ಕಾಂಗ್ರೆಸ್ ಪಕ್ಷ ಭರಿಸಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
![ವಲಸೆ ಕಾರ್ಮಿಕರನ್ನು ಕರೆ ತರಲು ವಿಶೇಷ ರೈಲು ವ್ಯವಸ್ಥೆ ಕಲ್ಪಿಸಿ: ಪ್ರಿಯಾಂಕ್ ಖರ್ಗೆ MLA Priyank Kharge](https://etvbharatimages.akamaized.net/etvbharat/prod-images/768-512-7058352-786-7058352-1588595420803.jpg)
ಮಾ.24 ರಂದು ಯಾವ ಪೂರ್ವ ಸಿದ್ದತೆಯಿಲ್ಲದೇ ಕೇಂದ್ರ ಲಾಕ್ ಡೌನ್ ಘೋಷಿಸಿದ ಪರಿಣಾಮ ಸಾವಿರಾರು ಸಂಖ್ಯೆಯ ವಲಸೆ ಕಾರ್ಮಿಕರು ತೀವ್ರ ಸಂಕಟ ಅನುಭವಿಸಿದರು. ಕೈಯಲ್ಲಿ ಕೆಲಸವಿಲ್ಲದೇ, ತಿನ್ನಲು ಅನ್ನವಿಲ್ಲದೇ ಪರದಾಡಿದರು. ಈ ಸಂದರ್ಭದಲ್ಲಿ ಕಾರ್ಮಿಕರ ನೆರವಿಗೆ ಬಾರದ ಕೇಂದ್ರ ಸರ್ಕಾರ ದೇಶ ವಿದೇಶಗಳಲ್ಲಿ ಸಿಲುಕಿದ್ದ ಗುಜರಾತ್ ಮೂಲದವರನ್ನ ವಿಶೇಷ ವಿಮಾನ ಮತ್ತು ಬಸ್ ಗಳ ಮೂಲಕ ಕರೆಸಿಕೊಂಡಿತು. ಆದರೆ, ಕೂಲಿ ಕಾರ್ಮಿಕರ ಬಗ್ಗೆ ಕಿಂಚತ್ತು ಕಾಳಜಿ ವಹಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಶೇಷ ರೈಲಿನ ವ್ಯವಸ್ಥೆ ಮಾಡಲಿ:
ಗೋವಾ ರಾಜ್ಯವೊಂದರಲ್ಲೇ ಸುಮಾರು 18,000 ವಲಸೆ ಕಾರ್ಮಿಕರು ರಾಜ್ಯಕ್ಕೆ ವಾಪಸ್ಸಾಗಲು ಹೆಸರು ನೋಂದಾಯಿಸಿದ್ದಾರೆ. ಜೊತೆಗೆ ಬೇರೆ ಬೇರೆ ರಾಜ್ಯಗಳಿಂದಲೂ ಕಾರ್ಮಿಕರು ವಾಪಸ್ ಬರಲು ಅನುಕೂಲವಾಗುವಂತೆ ವಿಶೇಷ ರೈಲಿನ ವ್ಯವಸ್ಥೆ ಮಾಡಲು ಈ ಕೂಡಲೇ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ಪಕ್ಷ ಕಾರ್ಮಿಕರ ರೈಲು ಪ್ರಯಾಣದ ವೆಚ್ಚ ಭರಿಸಲಿದ್ದು ಸಿಎಂ ಯಡಿಯೂರಪ್ಪ ಅವರು ಈ ಕೂಡಲೇ ಕರ್ನಾಟಕ ಮೂಲದ ಕಾರ್ಮಿಕರನ್ನು ವಾಪಸ್ ಕರೆಸಿಕೊಳ್ಳಲಿ ಎಂದು ಅವರು ಆಗ್ರಹಿಸಿದ್ದಾರೆ.