ಸೇಡಂ (ಕಲಬುರಗಿ):ಎರಡನೇ ಬಾರಿಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರಿಗೆ ಕೋವಿಡ್ ಸೋಂಕು ತಗುಲಿದೆ.
ತಹಶೀಲ್ದಾರ್ ಬಸವರಾಜ ಬೆಣ್ಞೆಶಿರೂರ, ತಾಲೂಕು ಆರೋಗ್ಯಾಧಿಕಾರಿ ಡಾ. ಸುರೇಶ ಮೇಕಿನ್ ಒಳಗೊಂಡಂತೆ ಅನೇಕ ಬಿಜೆಪಿ ಮುಖಂಡರೊಂದಿಗೆ ಬುಧವಾರ ಶಾಸಕರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ್ದರು.