ಕರ್ನಾಟಕ

karnataka

ETV Bharat / state

ಕಲ್ಯಾಣ ಕರ್ನಾಟಕಕ್ಕೆ ಸಂಪುಟದಲ್ಲಿ ಸ್ಥಾನ ಸಿಗದಿರುವ ಬಗ್ಗೆ ಚರ್ಚಿಸುತ್ತೇವೆ: ಶಾಸಕ ರಾಜಕುಮಾರ್ ಪಾಟೀಲ್

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗದಿರುವ ಬಗ್ಗೆ ನಾವು ಸಹ ಅರುಣಸಿಂಗ್ ಅವರೊಂದಿಗೆ ಚರ್ಚಿಸುತ್ತೇವೆ. ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕಕ್ಕೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಿಕೊಡುವ ಕುರಿತು ಮಾತನಾಡುತ್ತೇವೆ ಎಂದಿದ್ದಾರೆ.

mla-rajkumar-patil
ಶಾಸಕ ರಾಜಕುಮಾರ್ ಪಾಟೀಲ್

By

Published : Jun 16, 2021, 8:14 PM IST

ಕಲಬುರಗಿ: ಪಕ್ಷದಲ್ಲಿ ಒಂದಿಷ್ಟು ಭಿನ್ನಮತ ಇರೋದು ಎಲ್ಲರಿಗೂ ಗೊತ್ತಿರುವ ವಿಚಾರ‌. ಆದರೆ, ಸಿಎಂ ಯಡಿಯೂರಪ್ಪ ವಿಚಾರಕ್ಕೆ ಬಂದಾಗ ಅವರು ತುಂಬಾ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಆದರೂ ಹೈಕಮಾಂಡ್ ಏನೇ ನಿರ್ಧಾರ ಕೈಗೊಂಡರೂ ಅದಕ್ಕೆ ನಾವು ಬದ್ಧವಾಗಿದ್ದೇವೆ ಎಂದು ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೆಲ ಶಾಸಕರು ಸಿಎಂ ವಿರುದ್ಧ ಬಹಿರಂಗ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಪಕ್ಷದ ಆಂತರಿಕ ವಿಚಾರಗಳು ಬಹಿರಂಗಗೊಳಿಸಿರುವುದನ್ನು ಕಡಿವಾಣ ಹಾಕುವುದಕ್ಕಾಗಿಯೇ, ರಾಷ್ಟ್ರೀಯ ನಾಯಕರಾದ ಅರುಣ್ ಸಿಂಗ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ‌. ಸಮಾಲೋಚನೆ ನಂತರ ರಾಷ್ಟ್ರೀಯ ನಾಯಕರು ಕೈಗೊಳ್ಳುವ ಯಾವುದೇ ನಿರ್ಧಾರಕ್ಕೂ ನಮ್ಮ ಬೆಂಬಲ ಇರುತ್ತದೆ ಎಂದರು.

ಸೇಡಂ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗದಿರುವ ಬಗ್ಗೆ ನಾವು ಸಹ ಅರುಣ್​ ಸಿಂಗ್ ಅವರೊಂದಿಗೆ ಚರ್ಚಿಸುತ್ತೇವೆ. ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕಕ್ಕೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಿಕೊಡುವ ಕುರಿತು ಮಾತನಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ:ಬಿಎಸ್‌ವೈ ಬದಲಾವಣೆ ಬೇಡ.. ಮುಖ್ಯಮಂತ್ರಿ ಬೆಂಬಲಕ್ಕೆ ನಿಂತ ವೀರಶೈವ ಲಿಂಗಾಯತ ಯುವ ವೇದಿಕೆ

ABOUT THE AUTHOR

...view details