ಕಲಬುರಗಿ:ನಗರದ ಪಬ್ಲಿಕ್ ಪಾರ್ಕ್ನಲ್ಲಿ ವಾಯು ವಿಹಾರಕ್ಕೆ ಬಂದಿದ್ದ ಸಾರ್ವಜನಿಕರೊಬ್ಬರಿಂದ ಮೊಬೈಲ್ ಕಳವು ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ ಪಾಳು ಬಿದ್ದ ಬಾವಿಗೆ ಹಾರಿ ಮೃತಪಟ್ಟಿದ್ದಾನೆ.
ವಾಯುವಿಹಾರಕ್ಕೆ ಬಂದಿದ್ದ ಸಾರ್ವಜನಿಕರನ್ನೇ ಟಾರ್ಗೆಟ್ ಮಾಡುತ್ತಿದ್ದ ಆರೋಪಿಯನ್ನು ನಗರದ ಹಮಾಲವಾಡಿ ನಿವಾಸಿ ಎಂದು ಗುರುತಿಸಲಾಗಿದೆ. ಈತ ಇದೇ 26 ರ ಸಂಜೆ ಸುಮಾರು 6 ಗಂಟೆ ಹೊತ್ತಿಗೆ ಸಾರ್ವಜನಿಕರಿಂದ ಮೊಬೈಲ್ ಕಿತ್ತುಕೊಂಡು ಓಡಿಹೋಗ್ತಿದ್ದ. ಆ ವೇಳೆ ಸಾರ್ವಜನಿಕರಿಂದ ತಪ್ಪಿಸಿಕೊಳ್ಳಲು ಹೋಗಿ ಮಬ್ಬು ಕತ್ತಲಿನಲ್ಲಿ ದಾರಿ ಕಾಣದೆ ಬಾವಿಯೊಳಗೆ ಬಿದ್ದಿದ್ದಾನೆ ಎನ್ನಲಾಗ್ತಿದೆ.