ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕಲಬುರಗಿಯಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಮುಂದಾಗಿದ್ದ 20ಕ್ಕೂ ಅಧಿಕ ಜನ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲಬುರಗಿಯಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಮುಂದಾಗಿದ್ದ 20ಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ - kalyana Karnataka separate state
ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತ್ಯೇಕ ಧ್ವಜಾರೋಹಣಕ್ಕೆ ಮುಂದಾಗಿದ್ದ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದರು.
ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಕೇಳಿಬರುತ್ತಿದೆ. ರಾಜ್ಯೋತ್ಸವದ ಹಿನ್ನೆಲೆ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ಕೋರ್ಟ್ ರಸ್ತೆಯಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ ಹೋರಾಟ ನಡೆಸಲಾಯಿತು. ಪ್ರತ್ಯೇಕ ರಾಜ್ಯ ಆಗಲೇಬೇಕು ಎಂದು ಘೋಷಣೆ ಕೂಗಿದ ಕಾರ್ಯಕರ್ತರು, ಪ್ರತ್ಯೇಕ ಧ್ವಜಾರೋಹಣ ನೇರವೇರಿಸಲು ಮುಂದಾದರು. ಈ ವೇಳೆ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದರು.
ಈ ವೇಳೆ ಮಾತನಾಡಿದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ್ ನರಿಬೋಳ, ಕಲ್ಯಾಣ ಕರ್ನಾಟಕಕ್ಕೆ ಎಲ್ಲಾ ಸರ್ಕಾರಗಳು ಮಲತಾಯಿ ಧೋರಣೆ ಅನಿಸರಿಸುತ್ತಿವೆ ಎಂದು ಆರೋಪಿಸಿದರು. ಹೀಗೆ ನಿರ್ಲಕ್ಷ್ಯ ಮುಂದುವರೆದರೆ ಮುಂಬರುವ ದಿನಗಳಲ್ಲಿ ಪ್ರತ್ಯೇಕ ರಾಜ್ಯದ ಹೋರಾಟ ತೀವ್ರಗೊಳಿಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದರು.