ಕಲಬುರಗಿ:ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಗುಡೂರು ತಾಂಡಾದಲ್ಲಿ ನಡೆದಿದೆ.
ಕಲುಷಿತ ನೀರು ಸೇವನೆ: ಜೇವರ್ಗಿಯಲ್ಲಿ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ - kannadanews
ಕಲುಷಿತ ನೀರು ಸೇವನೆಯಿಂದಾಗಿ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಗುಡೂರು ತಾಂಡಾಕ್ಕೆ ಕಲುಷಿತಗೊಂಡ ನೀರು ಸರಬರಾಜಾಗಿದ್ದು, ಅದೇ ನೀರನ್ನು ಸೇವಿಸಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಲುಷಿತ ನೀರನ್ನು ಕುಡಿದು ವಾಂತಿ ಭೇದಿ ಜ್ವರದಿಂದ ತಾಂಡಾ ನಿವಾಸಿಗಳು ಅಸ್ವಸ್ಥಗೊಂಡಿದ್ದು, ಜೇವರ್ಗಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಬ ರೋಗಿಗಳು ಚೇತರಿಸಿಕೊಳ್ಳುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇನ್ನು ಕಲುಷಿತ ನೀರು ಸೇವನೆ ದುರ್ಘಟನೆ ಬಗ್ಗೆ ಮಾಹಿತಿ ಅರಿತ ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಚಿಕಿತ್ಸೆಗೆ ತೊಂದರೆಯಾಗದಂತೆ ಸೂಕ್ತ ಕ್ರಮಕ್ಕೆ ತಾಲೂಕು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.