ಕಲಬುರಗಿ:ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿಯೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅಫಜಲಪುರ ತಾಲೂಕಿನ ಸಂಗಾಪೂರ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಒಂದೂವರೆ ವರ್ಷದ ದಾಕ್ಷಾಯಿಣಿ ಮತ್ತು ಎರಡು ತಿಂಗಳ ಹಸುಗೂಸು ಸಾವನ್ನಪ್ಪಿದ್ದು, ತಾಯಿ ಭಾಗಮ್ಮಳನ್ನು ಗ್ರಾಮಸ್ಥರು ರಕ್ಷಣೆ ಮಾಡಿದ್ದಾರೆ. ಅಸ್ವಸ್ಥಗೊಂಡ ತಾಯಿ ಭಾಗಮ್ಮಳನ್ನು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚೇತರಿಸಿಕೊಂಡಿದ್ದಾಳೆ.