ಕಲಬುರಗಿ:ಇಬ್ಬರು ಮಕ್ಕಳೊಂದಿಗೆ ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಮಾಡ್ಯಾಳ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮಿ ಏಳಕೆ (28) ಹಾಗೂ ಮಕ್ಕಳಾದ ಗೌರಮ್ಮ (6), ಸಾವಿತ್ರಿ (1) ಮೃತಪಟ್ಟವರು. ಇನ್ನೋರ್ವ ಬಾಲಕಿ ಈಶ್ವರಿ (4) ಎಂಬುವಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮಹಿಳೆ ಲಕ್ಷ್ಮಿ ತನ್ನ ಮೂವರು ಮಕ್ಕಳೊಂದಿಗೆ ಗ್ರಾಮದ ಹೊರವಲಯದ ಜಮೀನೊಂದರಲ್ಲಿನ ಬಾವಿಗೆ ಜಿಗಿದಿದ್ದು, ಓರ್ವ ಮಗಳು ಬದುಕುಳಿದಿದ್ದಾಳೆ.