ಕರ್ನಾಟಕ

karnataka

ETV Bharat / state

ರಸ್ತೆಯಲ್ಲಿ ನರಳುತ್ತ ಬಿದ್ದಿದ್ದವನನ್ನ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಂಸದ.. - MP Umesh Jadhav

ಮನೆಗೆ ತೆರಳುತ್ತಿದ್ದ ಡಾ. ಉಮೇಶ್‌ ಜಾಧವ್ ತಕ್ಷಣ ಕಾರಿನಿಂದ ಕೆಳಗಿಳಿದು ವ್ಯಕ್ತಿ ಬಳಿ ಹೋಗಿ ಫಲ್ಸ್ ಚೆಕ್ ಮಾಡಿದರು. ಬಳಿಕ ಆ್ಯಂಬುಲೆನ್ಸ್‌ನಲ್ಲಿ ಜಿಮ್ಸ್‌ ಆಸ್ಪತ್ರೆಗೆ ‌ದಾಖಲಿಸಿದ್ದಾರೆ.

MP Umesh Jadhav
ರಸ್ತೆಯಲ್ಲಿ ಬಿದ್ದು ನರಳುತ್ತಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಉಮೇಶ್ ಜಾಧವ್

By

Published : Mar 29, 2020, 5:59 PM IST

ಕಲಬುರಗಿ:ರಸ್ತೆಬದಿ ಬಿದ್ದು ನರಳಾಡುತ್ತಿದ್ದ ವ್ಯಕ್ತಿಗೆ ಸಂಸದ ಡಾ. ಉಮೇಶ್ ಜಾಧವ್ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಅಷ್ಟೇ ಅಲ್ಲ, ಆ ವ್ಯಕ್ತಿಯನ್ನ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ರಸ್ತೆಯಲ್ಲಿ ಬಿದ್ದು ನರಳುತ್ತಿದ್ದ ವ್ಯಕ್ತಿಯನ್ನ ಆಸ್ಪತ್ರೆಗೆ ದಾಖಲಿಸಿದ ಸಂಸದರು..
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಸಮೀಪ ವ್ಯಕ್ತಿಯೋರ್ವ ಬಿಸಿಲಿನ ತಾಪಕೆ ತಲೆಸುತ್ತಿ ಬಿದ್ದು ನರಳಾಡುತ್ತಿದ್ದ. ಇದೇ ಮಾರ್ಗವಾಗಿ ಮನೆಗೆ ತೆರಳುತ್ತಿದ್ದ ಡಾ. ಉಮೇಶ್‌ ಜಾಧವ್ ತಕ್ಷಣ ಕಾರಿನಿಂದ ಕೆಳಗಿಳಿದು ವ್ಯಕ್ತಿ ಬಳಿ ಹೋಗಿ ಫಲ್ಸ್ ಚೆಕ್ ಮಾಡಿದರು. ಬಳಿಕ ಆ್ಯಂಬುಲೆನ್ಸ್‌ನಲ್ಲಿ ಜಿಮ್ಸ್‌ ಆಸ್ಪತ್ರೆಗೆ ‌ದಾಖಲಿಸಿದ್ದಾರೆ.ಸಂಸದರ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ.

ABOUT THE AUTHOR

...view details