ಕರ್ನಾಟಕ

karnataka

ETV Bharat / state

ಇದು ಗೂಬೆ ಕೂರಿಸುವ ಕೆಲಸ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಸಂಸದ ಜಾಧವ್ ಪ್ರತಿಕ್ರಿಯೆ - Priyank Kharge statement

ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಂಸದ ಉಮೇಶ್ ಜಾಧವ್, ಕೊರೊನಾ ಸಂದರ್ಭದಲ್ಲಿಯೂ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

MP Umesh Jadhav reaction about Priyank Kharge statement
ಸಂಸದ ಉಮೇಶ್ ಜಾಧವ್

By

Published : Apr 29, 2020, 8:34 PM IST

ಕಲಬುರಗಿ: ಕೊರೊನಾ ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನೂ ಸರ್ಕಾರ ನೀಡಿದೆ ಎಂದು ಸಂಸದ ಉಮೇಶ್ ಜಾಧವ್ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ವಿನಾ ಕಾರಣ ಶಾಸಕ ಪ್ರಿಯಾಂಕ್ ಖರ್ಗೆ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿಯೂ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಂಸದ ಉಮೇಶ್ ಜಾಧವ್

ಆದರೆ, ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಂಖ್ಯೆ, ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಕುರಿತು ಪ್ರತಿಕ್ರಿಯಿಸಲು ಜಾಧವ್ ನಿರಾಕರಿಸಿದರು. ಜಿಲ್ಲಾಧಿಕಾರಿ ಶರತ್ ಬಿ. ವರ್ಗಾವಣೆ ಕುರಿತು ಪ್ರತಿಕ್ರಿಯಿಸಿದ ಜಾಧವ್, ನಮಗೆ ಉತ್ತಮವಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಬೇಕೆನ್ನುವ ಮೂಲಕ ಪರೋಕ್ಷವಾಗಿ ವರ್ಗಾವಣೆಗೆ ಪ್ರಯತ್ನಿಸಿದ್ದನ್ನು ಒಪ್ಪಿಕೊಂಡರು.

ABOUT THE AUTHOR

...view details