ಕಲಬುರಗಿ:ಯುವತಿಯ ವಿಚಾರವಾಗಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಪುರ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಯುವತಿಯ ವಿಚಾರಕ್ಕೆ ಯುವಕನ ಕೊಲೆ ಪ್ರಕರಣ: ನಾಲ್ವರ ಬಂಧನ - murder case in kalburgi
ಯುವತಿಯ ಕಾರಣಕ್ಕೆ ಚಿರಂಜೀವಿ ಎಂಬಾತನನ್ನು ಹತ್ಯೆಗೈದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಸಂಬಂಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವಕನ ಕೊಲೆ ಪ್ರಕರಣ ಸಂಬಂಧಿಸಿದಂತೆ ನಾಲ್ವರ ಬಂಧನ
ಏಪ್ರಿಲ್ 24ರಂದು ನಗರದ ಮಾಂಗರವಾಡಿ ಬಡಾವಣೆಯ ಚಿರಂಜೀವಿ ಎಂಬಾತನನ್ನು ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿದ್ದರು. ಈ ಸಂಬಂಧ ಕಾಶಿನಾಥ ಉಪಾಧ್ಯಾ, ವಿಶ್ವನಾಥ ಉಪಾಧ್ಯಾಯ, ರಘುನಾಥ ಉಪಾಧ್ಯಾಯ, ಮೋಹನ ಬನಸಿಲ ಉಪಾಧ್ಯಾಯ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.