ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆಗೈದ ಘಟನೆ ನಗರದ ಎಂ.ಜಿ. ರಸ್ತೆಯ ಕಟ್ಟಡವೊಂದರ ಹಿಂಭಾಗದಲ್ಲಿ ನಡೆದಿದೆ.
ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕಗ್ಗೊಲೆ - M.B.Nagar Police Station, Kalaburagi
ಕಲಬುರಗಿಯಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು, ಈ ಸಂಬಂಧ ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವಕನ ಕಗ್ಗೊಲೆ
ಸುಲ್ತಾನಪುರ್ ರಿಂಗ್ ರೋಡ್ ಬಳಿ ನಿವಾಸಿ ಗುಲಾಮ್ ದಸ್ತಾಗಿರ್(24) ಕೊಲೆಯಾದ ಯುವಕ. ನಿರ್ಮಾಣ ಹಂತದ ಕಟ್ಟಡದಲ್ಲಿ ಯುವಕನ ಶವ ಪತ್ತೆಯಾಗಿದ್ದು, ಬೇರೆ ಕಡೆ ಹತ್ಯೆಗೈದು ಇಲ್ಲಿ ತಂದು ಎಸೆದಿರುವ ಶಂಕೆ ವ್ಯಕ್ತವಾಗಿದೆ.
ಎಂದಿನಂತೆ ಬೆಳಗ್ಗೆ ಕೆಲಸಕ್ಕೆ ಆಗಮಿಸಿದ್ದ ವಾಚ್ಮ್ಯಾನ್ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.