ಕಲಬುರಗಿ: ಹಳೆ ವೈಷಮ್ಯದ ಹಿನ್ನೆಲೆ ತಲವಾರ್‌ನಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರ್ (ಬಿ) ಗ್ರಾಮದಲ್ಲಿ ನಡೆದಿದೆ.
ಭೀಮರಾಯ್(22 ) ಕೊಲೆಯಾದ ಯುವಕ. ಇಂದು ಬೆಳಗಿನ ಜಾವ 3 ಗಂಟೆಗೆ ಭೀಮರಾಯ್ ಮನೆಯಲ್ಲಿ ಮಲಗಿದ್ದಾಗ, ಅದೇ ಗ್ರಾಮದ 20 ವರ್ಷದ ಸಿದ್ದಪ್ಪ ಎಂಬಾತ ತಲವಾರ್‌ನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.