ಕಲಬುರಗಿ : ಅರಣ್ಯ ಇಲಾಖೆಯ ಸಿಬ್ಬಂದಿ ಸಮಯಚಿತ್ತ ಹಾಗೂ ಅನ್ಯೋನ್ಯತೆಯಿಂದ ಕೆಲಸ ಮಾಡುವ ಮೂಲಕ ದೇಶದ ಅನರ್ಘ್ಯ ಸಂಪತ್ತಾದ ಅರಣ್ಯ ಸಂರಕ್ಷಣೆಯನ್ನು ಮಾಡಬೇಕು ಎಂದು ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆರ್. ಆರ್.ಯಾಧವ್ ಕಿವಿಮಾತು ಹೇಳಿದರು.
ನಗರದ ಅರಣ್ಯ ಇಲಾಖೆಯ ಕಚೇರಿ ಸಂಕಿರಣದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಸೇವೆಯಲ್ಲಿದ್ದಾಗ ಇವರು ಅಗತ್ಯ ವಸ್ತು ಮತ್ತು ಶಸ್ತ್ರಾಸ್ತ್ರಗಳೊಂದಿಗೆ ಕಾಡಿನಲ್ಲಿ ಪ್ರಯಾಣ ಮಾಡಬೇಕು. ಕಾಡು ಪ್ರಾಣಿಗಳ ದಾಳಿಗಳಿಂದ ರಕ್ಷಣೆ ಮಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರಬೇಕು. ತಮ್ಮ ಜೀವದ ಜೊತೆಗೆ ಉಳಿದ ಅಧಿಕಾರಿ ಮತ್ತು ಸಿಬ್ಬಂದಿಯ ಜೀವ ರಕ್ಷಣೆ ಮಾಡುವ ಮೂಲಕ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.