ಕಲಬುರಗಿ:ಜಿಲ್ಲೆಯ ಚಿಂಚೋಳಿ ತಾಲೂಕಿನ ನಿಡಗುಂದಾ ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗೆ ಕನ್ನ ಹಾಕಿದ ಕದೀಮರು, 50 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 12 ಲಕ್ಷಕ್ಕೂ ಅಧಿಕ ನಗದು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ನಿಡಗುಂದಾ ಕರ್ನಾಟಕ ಗ್ರಾಮೀಣ ಬ್ಯಾಂಕ್ ಲೂಟಿ: 50 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಲೂಟಿ - Chincholi Taluk of Kalaburagi District
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ನಿಡಗುಂದಾ ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ಕಳ್ಳತನವಾಗಿದ್ದು, 50 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 12 ಲಕ್ಷಕ್ಕೂ ಅಧಿಕ ನಗದು ಕಳ್ಳತನವಾಗಿದೆ. ಕಳ್ಳರು ಕಿಟಕಿ ಮೂಲಕ ಒಳಗೆ ನುಸುಳಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇನ್ನೂ ಕಳ್ಳತನದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇಬ್ಬರು ಮುಸುಕುದಾರಿಗಳು ಬ್ಯಾಂಕ್ ಕಿಡಕಿಯಿಂದ ಒಳನುಗ್ಗುವುದನ್ನು ಕಾಣಬಹುದಾಗಿದೆ. ಬಳಿಕ ಸಿಸಿಟಿವಿ ಕ್ಯಾಮರಾ ಲೈನ್ ಕತ್ತರಿಸಿ ಕಳ್ಳತನ ಮಾಡಿದ ಖದೀಮರು, ಲಾಕರ್ ನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಲೂಟಿ ಮಾಡಿಕೊಂಡು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಸುಲೇಪೇಟ್ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸುತ್ತಿದ್ದು, ಸದ್ಯ ಕಳವಾಗಿರುವ ಹಣ ಹಾಗೂ ಚಿನ್ನಾಭರಣದ ಲೆಕ್ಕ ಶೋಧಿಸಲಾಗುತ್ತಿದೆ. ಈ ಕುರಿತು ಸುಲೇಪೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಕಳ್ಳರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.