ಕಲಬುರಗಿ:ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಿಗದಿಪಡಿಸುರುವ ವೇಳಾಪಟ್ಟಿಯಂತೆ, ಕಲಬುರಗಿಯಲ್ಲಿಯೂ ಸಹ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಅಪರ ಜಿಲ್ಲಾಧಿಕಾರಿ ರಾಚಪ್ಪ ತಿಳಿಸಿದ್ದಾರೆ.
'ಎಸ್ಎಸ್ಎಲ್ಸಿ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ' - no change in the SSLC schedule
ಎಸ್ಎಸ್ಎಲ್ಸಿ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರೋದಿಲ್ಲ. ಆದರೆ ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳು ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಬರಬೇಕು ಎಂದು ಅಪರ ಜಿಲ್ಲಾಧಿಕಾರಿ ರಾಚಪ್ಪ ತಿಳಿಸಿದ್ದಾರೆ.
!['ಎಸ್ಎಸ್ಎಲ್ಸಿ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ' no change in the SSLC schedule](https://etvbharatimages.akamaized.net/etvbharat/prod-images/768-512-6436775-thumbnail-3x2-smk.jpg)
ಎಸ್ಎಸ್ಎಲ್ಸಿ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ
ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರೋದಿಲ್ಲ. ಆದರೆ ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳು ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಬರಬೇಕು ಎಂದರು. ಕಲಬುರಗಿಯಲ್ಲಿ ಕೊರೊನಾ ಭೀತಿ ಹೆಚ್ಚಿರುವುದರಿಂದ ಜಾಗೃತರಾಗಿ ಪರೀಕ್ಷೆಯಲ್ಲಿ ಭಾಗವಹಿಸಿ ಎಂದು ತಿಳಿಸಿದರು.