ಸೇಡಂ/ಕಲಬುರಗಿ:ವಾಸವದತ್ತಾ ಸಿಮೆಂಟ್ ಕಾರ್ಖಾನೆಯ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂಬ ವದಂತಿ ಸುದ್ದಿ ಸುಳ್ಳಾಗಿದ್ದು ಸೇಡಂ ಜನ ನಿಟ್ಟುಸಿರು ಬಿಟ್ಟಿದ್ದಾರೆ.
ವಾಸವದತ್ತಾದಲ್ಲಿ ಇಬ್ಬರಿಗೆ ಕೊರೊನಾ ಸೋಂಕು ವದಂತಿ, ವೈದ್ಯರಿಂದ ಸ್ಪಷ್ಟನೆ - corona virus
ಸೇಡಂನ ವಾಸವದತ್ತಾ ಸಿಮೆಂಟ್ ಕಾರ್ಖಾನೆಯ ಇಬ್ಬರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಕೊರೊನಾ ಸೋಂಕು ತಗುಲಿಲ್ಲ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ಇಲ್ಲಿನ ಬಿರ್ಲಾ ಒಡೆತನದ ವಾಸವದತ್ತಾ ಸಿಮೆಂಟ್ ಕಾರ್ಖಾನೆಯಲ್ಲಿನ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂಬ ಸುದ್ದಿ ಹರಿದಾಡಿತ್ತು. ಇದು ಸಹಜವಾಗಿಯೇ ಜನರಲ್ಲಿ ಆತಂಕ ಉಂಟು ಮಾಡಿತ್ತು. ತಕ್ಷಣ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಇಬ್ಬರನ್ನೂ ರಾತ್ರಿ ಆ್ಯಂಬುಲೆನ್ಸ್ ಮೂಲಕ ಜಿಮ್ಸ್ ಆಸ್ಪತ್ರೆಗೆ ರವಾನಿಸಿದ್ದರು.
ಇಬ್ಬರನ್ನೂ ತಪಾಸಣೆಗೊಳಪಡಿಸಿದ ವೈದ್ಯರ ತಂಡ ಅನುಮಾನಿತರ ಪೈಕಿ ಮಹಿಳೆಯಲ್ಲಿ ಅಸ್ತಮಾ ಇದ್ದು, ಇದು ಕೊರೊನಾ ಲಕ್ಷಣವಲ್ಲ ಎಂದು ದೃಢಪಡಿಸಿದ್ದಾರೆ. ಜೊತೆಗೆ ಮಹಿಳೆಯ ಪತಿಗೂ ಯಾವುದೇ ಸಮಸ್ಯೆ ಇಲ್ಲ ಎಂದು ಡಾ. ಸದಾನಂದ ರೆಡ್ಡಿ ಖಚಿತಪಡಿಸಿದ್ದಾರೆ.