ಕರ್ನಾಟಕ

karnataka

ETV Bharat / state

ಕಲಬುರಗಿಯ ಎರಡು ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್

ಕೊರೊನಾ ಸೋಂಕಿತರಿಂದ ಹೆಚ್ಚು ಹಣ ಪಡೆದ ಆರೋಪ ಮೇಲೆ, ಕಲಬುರಗಿಯ ಎರಡು ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಾಜಶೇಖರ್ ನೋಟಿಸ್ ಜಾರಿ ಮಾಡಿದ್ದಾರೆ.

ಧನ್ವಂತರಿ ಆಸ್ಪತ್ರೆ
ಧನ್ವಂತರಿ ಆಸ್ಪತ್ರೆ

By

Published : Sep 7, 2020, 8:00 PM IST

ಕಲಬುರಗಿ:ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳಿಂದ ಹಣ ಸುಲಿಗೆ ಜೋರಾಗಿದೆ. ಕೊರೊನಾ ಸೋಂಕಿತರಿಂದ ಹೆಚ್ಚು ಹಣ ಪಡೆದ ಆರೋಪ ಹಿನ್ನೆಲೆಯಲ್ಲಿ ಕಲಬುರಗಿಯ ಎರಡು ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಾಜಶೇಖರ್ ನೋಟಿಸ್ ಜಾರಿ ಮಾಡಿದ್ದಾರೆ. ನಗರದ ಧನ್ವಂತರಿ ಹಾಗೂ ವಾತ್ಸಲ್ಯ ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿದೆ. ವ್ಯಾಪಕ ದೂರು ಬಂದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ನೋಟಿಸ್​ಗೆ ಉತ್ತರ ಬಂದ ನಂತರ ಕ್ರಮ ಕೈಗೊಳ್ಳುವುದಾಗಿ ಡಿಎಚ್ಒ ರಾಜಶೇಖರ್ ಮಾಹಿತಿ ನೀಡಿದ್ದಾರೆ.

ಕಲಬುರಗಿಯ ಎರಡು ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್

ತಾಲೂಕು ಕೇಂದ್ರಗಳಿಗೂ ಕೊರೊನಾ ಕೇಂದ್ರಗಳ ವಿಸ್ತರಣೆ

ಜಿಲ್ಲೆಯಲ್ಲಿ ಕೊರೊನಾ ವ್ಯಾಪಕಗೊಂಡಿರೋ ಹಿನ್ನೆಲೆ ತಾಲೂಕು ಕೇಂದ್ರಗಳಿಗೂ ಕೊರೊನಾ ಕೇಂದ್ರಗಳ ವಿಸ್ತರಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಜಿಲ್ಲೆಯ ನಾಲ್ಕು ಕೇಂದ್ರಗಳಲ್ಲಿ ಕೊರೊನಾ ಕೇರ್ ಸೆಂಟರ್ ಆರಂಭ ಮಾಡಲಾಗಿದೆ. ಚಿತ್ತಾಪುರ, ಸೇಡಂ, ಆಳಂದ ಹಾಗೂ ಜೇವರ್ಗಿ ತಾಲೂಕುಗಳಲ್ಲಿ ಆರಂಭಿಸಲಾಗಿದೆ. ಶೀಘ್ರವೇ ಚಿಂಚೋಳಿಯಲ್ಲಿಯೂ ಕೋವಿಡ್ ಕೇರ್ ಸೆಂಟರ್ ತೆರೆಯಲಾಗುವುದೆಂದು ರಾಜಶೇಖರ್ ತಿಳಿಸಿದ್ದಾರೆ.

ABOUT THE AUTHOR

...view details