ಕಲಬುರಗಿ: ನಗರದ ವಿಮಾನ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಇದೇ ನವೆಂಬರ್ 22ರಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಂಗಳೂರು ವಿಮಾನ ನಿಲ್ದಾಣದಿಂದ ಸ್ಟಾರ್ ಏರ್ ಸಂಸ್ಥೆಯ ವಿಮಾನದಲ್ಲಿ ಆಗಮಿಸಿ ಅದೇ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ತಿಳಿಸಿದ್ದಾರೆ.
ಬೆಂಗಳೂರಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮ ಕುರಿತು ಎಎಐ ಮತ್ತು ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆ ಬಗ್ಗೆ ಪರಿಶೀಲಿಸಿ ಮಾತನಾಡಿದ ಅವರು, ಕೇವಲ 35 ನಿಮಿಷ ಮಾತ್ರ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಅದರನ್ವಯ ಕಾರ್ಯಕ್ರಮ ರೂಪಿಸುವಂತೆ ಜಿಲ್ಲಾಧಿಕಾರಿ ಬಿ ಶರತ್ ಅವರಿಗೆ ಸೂಚನೆ ನೀಡಿದರು.
ನ.22ಕ್ಕೆ ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆ..
ನಗರದ ವಿಮಾನ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಇದೇ ನವೆಂಬರ್ 22ರಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಂಗಳೂರು ವಿಮಾನ ನಿಲ್ದಾಣದಿಂದ ಸ್ಟಾರ್ ಏರ್ ಸಂಸ್ಥೆಯ ವಿಮಾನದಲ್ಲಿ ಆಗಮಿಸಿ ಅದೇ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರವೇ ಸಂಪೂರ್ಣವಾಗಿ 175.57 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ ಕಲಬುರಗಿ ವಿಮಾನ ನಿಲ್ದಾಣ ಯೋಜನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಲಿದೆ. ಹೀಗಾಗಿ ವಿಮಾನ ನಿಲ್ದಾಣ ಸಾಗಿ ಬಂದ ಹಾದಿ ಕುರಿತು ಸಂಕ್ಷಿಪ್ತ ಮಾಹಿತಿವುಳ್ಳ ಕರಪತ್ರಗಳನ್ನು ಅಂದು ಸಾರ್ವಜನಿಕರಿಗೆ ಹಂಚಿಕೆ ಮಾಡುಬೇಕು ಎಂದು ತಿಳಿಸಿದರು. ಇದೇ ವೇಳೆ ಜಿಲ್ಲಾಧಿಕಾರಿ ಶರತ್ ಮಾತನಾಡಿ, ವಿಮಾನ ನಿಲ್ದಾಣದ ಟರ್ಮಿನಲ್ ಕಾಂಪ್ಲೆಕ್ಸ್ ಎದುರುಗಡೆ ಸಾರ್ವಜನಿಕ ಸಮಾರಂಭ ಏರ್ಪಡಿಸಲಾಗಿದೆ. ಮುಖ್ಯಮಂತ್ರಿಗಳು, ಸಚಿವರು, ಜನಪ್ರತಿನಿಧಿಗಳು, ಗಣ್ಯರು, ಹಿರಿಯ ಅಧಿಕಾರಿಗಳು ಸೇರಿ ಸುಮಾರು 5000ಕ್ಕೂ ಹೆಚ್ಚಿನ ಜನ ಸೇರುವ ನಿರೀಕ್ಷೆ ಇದೆ ಎಂದರು.