ಕರ್ನಾಟಕ

karnataka

ಅಕ್ರಮ ಪಡಿತರ ಅಕ್ಕಿ ಸಾಗಾಟ: ಲಾರಿ ವಶಕ್ಕೆ ಪಡೆದ ಅಧಿಕಾರಿಗಳು

By

Published : Jun 21, 2020, 8:38 PM IST

ಕಲಬುರಗಿಯ ಆಳಂದ ತಾಲೂಕಿನ ಖಜೂರಿ ಚೆಕ್‌ ಪೋಸ್ಟ್ ಬಳಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Kalburgi
Kalburgi

ಕಲಬುರಗಿ:ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, 41 ಟನ್ ಅಕ್ಕಿ ಜಪ್ತಿ ಮಾಡಿಕೊಂಡಿದ್ದಾರೆ.

ಆಳಂದ ತಾಲೂಕಿನ ಖಜೂರಿ ಚೆಕ್‌ ಪೋಸ್ಟ್ ಬಳಿ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿಯನ್ನು ರಾಯಚೂರಿನಿಂದ ಗುಜರಾತ್ ಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಅಧಿಕಾರಿಗಳು ದಾಳಿ ನಡೆಸಿ ಲಾರಿ ಚಾಲಕ ಖಾಜಿ ಸಾಬ್ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details