ಕಲಬುರಗಿ:ಡಿಜಿಟಲ್ ಇಂಡಿಯಾ ಪರಿಕಲ್ಪನೆಯಡಿ ಪ್ರತಿ ಹಳ್ಳಿಯೂ ಡಿಜಿಟಲ್ ಸೇವೆ ಪಡೆಯಬೇಕು ಎಂಬುದು ಕೇಂದ್ರ ಸರ್ಕಾರದ ಸದಾಶಯವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಲೋಕಸಭಾ ಸದಸ್ಯ ಹಾಗೂ ದೂರವಾಣಿ ಸಲಹಾ ಸಮಿತಿ ಅಧ್ಯಕ್ಷ ಡಾ. ಉಮೇಶ್ ಜಾಧವ್ ಹೇಳಿದ್ದಾರೆ.
ಬಿ.ಎಸ್.ಎನ್.ಎಲ್ ಕಚೇರಿಯಲ್ಲಿ ನಡೆದ ದೂರವಾಣಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಾಜದ ಕೊನೆ ವ್ಯಕ್ತಿಗೂ ಡಿಜಿಟಲ್ ಸೌಲಭ್ಯಗಳನ್ನು ಒದಗಿಸುವುದು ಕೇಂದ್ರ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಜಿಲ್ಲೆಯ ಬಹುತೇಕ ಗ್ರಾಮ ಮತ್ತು ಸಣ್ಣ ಪಟ್ಟಣಗಳಲ್ಲಿ ಅಳವಡಿಸಿರುವ ಓ.ಎಫ್.ಸಿ. ಕೇಬಲ್ ಸರಿಯಾಗಿ ನಿರ್ವಹಣೆ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಕೂಡಲೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.