ಕರ್ನಾಟಕ

karnataka

ETV Bharat / state

ಕಲಬುರಗಿಯಲ್ಲಿ ಧಾರಾಕಾರ ಮಳೆ - ಮನೆ ಕುಸಿದು ವೃದ್ಧೆ ಸಾವು! - kalaburagi old woman death

ಭಾರಿ ಮಳೆ ಹಿನ್ನೆಲೆ ಮನೆ ಕುಸಿದು ಓರ್ವ ವೃದ್ಧೆ ಸಾವನ್ನಪ್ಪಿ, ಮತ್ತಿಬ್ಬರು ಗಾಯಗೊಂಡಿದ್ದಾರೆ.

House collapsed due to rain
ಮಳೆಗೆ ಮನೆ ಕುಸಿತ

By

Published : Jul 9, 2022, 3:11 PM IST

ಕಲಬುರಗಿ: ಕಳೆದ ನಾಲ್ಕು ದಿನಗಳಿಂದ ಎಡಬಿಡದೆ ಜಿಲ್ಲಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಗೆ ಶಿಥಿಲಗೊಂಡಿದ್ದ ಮನೆ ಕುಸಿದು ಓರ್ವ ವೃದ್ಧೆ ಸಾವನ್ನಪ್ಪಿ, ಮತ್ತಿಬ್ಬರು ಗಾಯಗೊಂಡ ಘಟನೆ ಚಿತ್ತಾಪೂರ ಪಟ್ಟಣದಲ್ಲಿ ನಡೆದಿದೆ. ಆರೀಫಾ ಬೇಗಂ (60) ಮೃತ ವೃದ್ಧೆ.

ಘಟನೆಯಲ್ಲಿ ಆರೀಫಾ ಬೇಗಂ ಪತಿ ಸರ್ಧಾರ್ ಅಲಿ ಹಾಗೂ ಮಗಳು ಯಾಸ್ಮಿನ್ ಬೇಗಂ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಳೆಗೆ ಮನೆ ಕುಸಿತ

ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಹಳ್ಳ - ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡು ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಅನೇಕ‌ ಮನೆಗಳು, ಅಂಗಡಿಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ರಸ್ತೆಗಳ ಮೇಲೆ ನೀರು ನಿಂತು ಅವಘಡಗಳು ಸಂಭವಿಸುತ್ತಿವೆ. ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಆದರೆ ನೌಕರರು ಮಳೆಯಲ್ಲಿ ಪರದಾಟ ನಡೆಸುತ್ತಿದ್ದಾರೆ. ಇನ್ನೂ ಎರಡು ದಿನಗಳ ಕಾಲ ಮಳೆ ಅರ್ಭಟಿಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜಿಲ್ಲೆಯ ಕೆಲ ಭಾಗಗಳಲ್ಲಿ ರೆಡ್ ಅಲರ್ಟ್ ಹಾಗೂ ಇನ್ನೂ ಕೆಲ ಭಾಗಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ:ಅಮರನಾಥ ಯಾತ್ರೆ: ಕಲಬುರಗಿಯ ಬಬಲಾದ ಶ್ರೀ ಸೇರಿ 55 ಮಂದಿ ಸುರಕ್ಷಿತ

ABOUT THE AUTHOR

...view details