ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ರೋಗಿ ಸಂಖ್ಯೆ 205 ಆಗಿದ್ದ 55 ವರ್ಷದ ವ್ಯಕ್ತಿ ಕೊರೊನಾ ಸೊಂಕಿನಿಂದ ಮೃತಪಟ್ಟಿದ್ದಾರೆಂದು ಜಿಲ್ಲಾಧಿಕಾರಿ ಬಿ.ಶರತ್ ಖಚಿತಪಡಿಸಿದ್ದಾರೆ.
ಕಲಬುರಗಿಯಲ್ಲಿ ಕೊರೊನಾಗೆ ಮತ್ತೊಂದು ಬಲಿ! - ಕಲಬುರಗಿ ಕೊರೊನಾ ನ್ಯೂಸ್
ಮೋಮಿನಪುರ ಬಡಾವಣೆ ನಿವಾಸಿ ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ ಇಎಸ್ಐ ಆಸ್ಪತ್ರೆಯಲ್ಲಿ ವೆಂಟಿಲೇಷನ್ ಅಳವಡಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ.
ಮೃತ ವ್ಯಕ್ತಿ ಮೋಮಿನಪುರ ಬಡಾವಣೆ ನಿವಾಸಿಯಾಗಿದ್ದು, ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ ಇಎಸ್ಐ ಆಸ್ಪತ್ರೆಯಲ್ಲಿ ವೆಂಟಿಲೇಷನ್ ಅಳವಡಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸಚಿವ ಶ್ರೀರಾಮುಲು ಸಹ ಟ್ವೀಟ್ ಮಾಡಿದ್ದು, ವ್ಯಕ್ತಿ ಕೊರೊನಾದಿಂದಲೇ ಮೃತಪಟ್ಟಿದ್ದಾನೆ ಅಂತ ಮಾಹಿತಿ ನೀಡಿದ್ದಾರೆ.
ದೆಹಲಿ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿ ಮರಳಿದ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ ಕಾರಣ ಸೋಂಕು ತಗುಲಿತ್ತು. ಆದ್ರೆ ಗಮನಾರ್ಹ ವಿಷಯ ಅಂದ್ರೆ ಸಭೆಯಲ್ಲಿ ಭಾಗಿಯಾಗಿ ಬಂದವನಿಗೆ ನೆಗೆಟಿವ್ ಇದೆ. ಸಂಪರ್ಕಕ್ಕೆ ಬಂದಿದ್ದ ವ್ಯಕ್ತಿಗೆ ಮಾತ್ರ ಪಾಸಿಟಿವ್ ಇತ್ತು. ಸದ್ಯ ಮೃತ ವ್ಯಕ್ತಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ. ಏಪ್ರಿಲ್ 9ಕ್ಕೆ ಇಎಸ್ಐ ಆಸ್ಪತ್ರೆಗೆ ದಾಖಲಾಗಿದ್ದ. ಚಿಕಿತ್ಸೆ ಫಲಿಸದೆ ಇಂದು ಸಂಜೆ ಸಾವನ್ನಪ್ಪಿದ್ದಾನೆ.