ಕಲಬುರಗಿ:ಕೊರೊನಾ ಸೋಂಕಿನಿಂದ ಜಿಲ್ಲೆಯ ಆಳಂದ ಪಟ್ಟಣದ ವ್ಯಕ್ತಿಯೋರ್ವ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.
ಕಲಬುರಗಿ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಬ್ಬ ಬಲಿ: 121 ಹೊಸ ಪ್ರಕರಣ ಪತ್ತೆ - ಕಲಬುರಗಿ ಕೊರೊನಾ ಪ್ರಕರಣ ವರದಿ
ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ 121 ಜನರಿಗೆ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 2,313ಕ್ಕೆ ತಲುಪಿದೆ.
121 ಹೊಸ ಪ್ರಕರಣ ಪತ್ತೆ
ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದ ವ್ಯಕ್ತಿಯು, ತೀವ್ರ ಉಸಿರಾಟ ತೊಂದರೆ ಹಿನ್ನೆಲೆ ಜುಲೈ 8ರಂದು ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ. ಅಂದೇ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದು, ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.
ಜಿಲ್ಲೆಯಲ್ಲಿ ಮಂಗಳವಾರ 121 ಜನರಿಗೆ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 2,313ಕ್ಕೆ ತಲುಪಿದೆ. 13 ಜನ ಸೇರಿ ಇದುವರೆಗೆ 1,506 ಜನರು ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದಾರೆ. ಇನ್ನುಳಿದಂತೆ ಜಿಲ್ಲೆಯಲ್ಲಿ 757 ಸಕ್ರಿಯ ಪ್ರಕರಣಗಳಿವೆ.