ಕಲಬುರಗಿ: ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 52 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ.
ಕಲಬುರಗಿಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ದೃಢ - ಕೊರೊನಾ ಪಾಸಿಟಿವ್ ದೃಢ
ಕಲಬುರಗಿ ಜಿಲ್ಲೆಯಲ್ಲಿ ಇಂದು ಮತ್ತೊಂದು ಕೊರೊನಾ ಪ್ರಕರಣ ದೃಢಪಟ್ಟಿದ್ದು, ಕೊರೊನಾ ಸೋಂಕಿತರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ.
ಕಲಬುರಗಿ
ಪಿ.610 ಸಂಖ್ಯೆಯ ಗಾಜಿಪುರ ಬಡಾವಣೆ ನಿವಾಸಿ 78 ವರ್ಷದ ವೃದ್ಧನ ಸಂಪರ್ಕದಲ್ಲಿದ್ದ ಕಾರಣ 52 ವರ್ಷದ ವ್ಯಕ್ತಿಗೆ ವೈರಸ್ ತಗುಲಿರುವುದು ದೃಢಪಟ್ಟಿದೆ. ನಗರದ ಇಎಸ್ಐ ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿ ಸೋಂಕಿತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಇದೀಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಸೋಂಕಿನಿಂದ ಆರು ಜನರು ಮೃತರಾಗಿದ್ದಾರೆ.