ಕಲಬುರಗಿ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣದಿಂದ ಜಿಲ್ಲೆಯನ್ನು ಒಂದು ವಾರ ಸಂಪೂರ್ಣ ಲಾಕ್‌ಡೌನ್ ಮಾಡಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.
ಕಲಬುರಗಿ ಜಿಲ್ಲೆ ಒಂದು ವಾರ ಸಂಪೂರ್ಣ ಲಾಕ್‌ಡೌನ್ - Lockdown news
ಕಲಬುರಗಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆ ಒಂದು ವಾರ ಸಂಪೂರ್ಣ ಲಾಕ್‌ಡೌನ್ ಮಾಡಿ ಎಂದು ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.
ಕಲಬುರಗಿ ನಗರದ ಜೊತೆಗೆ ಜಿಲ್ಲೆಯ ಎಲ್ಲಾ ತಾಲೂಕಿನ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಾಳೆಯಿಂದ ಲಾಕ್‌ಡೌನ್ ಜಾರಿಗೆ ಬರಲಿದೆ. ಜುಲೈ14 ರಿಂದ ಜುಲೈ 20 ರವರೆಗೆ ಲಾಕ್‌ಡೌನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ. ನಗರ ಪ್ರದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬಿದ್ದು, ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಈ ನಿರ್ಧಾರಕ್ಕೆ ಬರಲಾಗಿದೆ. ತುರ್ತು ಸೇವೆ ಹೊರತುಪಡಿಸಿ ಉಳಿದ ಸೇವೆಗಳ ಮೇಲೆ ನಿರ್ಬಂಧ ಹೇರಲಾಗಿದೆ.
ವೈದ್ಯಕೀಯ ಸೇವೆ ಮತ್ತಿತರ ಸೇವೆಗಳು ಮಾತ್ರ ಲಭ್ಯವಿರಲಿದ್ದು, ಅನಗತ್ಯ ವಾಹನ ಸಂಚಾರಕ್ಕೆ ಹಾಗೂ ಬಸ್ ಸಂಚಾರಕ್ಕೂ ನಿರ್ಬಂಧ ಹೇರಲಾಗಿದೆ. ಇಂದು ನಡೆದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಸಿಎಂ ಅವರು, ಲಾಕ್‌ಡೌನ್ ಮಾಡುವುದು ಡಿಸಿ ವಿವೇಚನೆಗೆ ಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದ ಡಿಸಿ ಶರತ್, ಕೊನೆಗೂ ಲಾಕ್‌ಡೌನ್ ಜಾರಿ ಮಾಡುವ ಮುೂಲಕ ಕೊರೊನಾ ಕಟ್ಟಿ ಹಾಕಲು ಮುಂದಾಗಿದ್ದಾರೆ.