ಕಲಬುರಗಿ:ಸಿಎಂ ಯಡಿಯೂರಪ್ಪ ವಿರುದ್ಧ ಆಪರೇಷನ್ ಕಮಲ ಆಡಿಯೋ ಪ್ರಕರಣ ತಡೆಯಾಜ್ಞೆಗೆ ತೆರವು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ನಡೆಯಲಿದೆ.
ಆಪರೇಷನ್ ಕಮಲದ ವಿಚಾರಣೆ: ತೀರ್ಪು ನೀಡುತ್ತಾ ಕಲಬುರಗಿ ನ್ಯಾಯಾಲಯ? - ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ವೇಳೆ ಆಪರೇಷನ್ ಕಮಲ
ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ವೇಳೆ ಈಗಿನ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಆಪರೇಷನ್ ಕಮಲದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು, ಇಂದು ಅದರ ವಿಚಾರಣೆ ಕಲಬುರಗಿ ನ್ಯಾಯಾಲಯದಲ್ಲಿ ನಡೆಯಲಿದೆ.
ತೀವ್ರ ಕುತೂಹಲ ಕೆರಳಿಸಿದ ಅಪರೇಷನ್ ಕಮಲ ಆಡಿಯೋ ಪ್ರಕರಣದ ತೀರ್ಪು ಹೊರಬೀಳೋ ಸಾಧ್ಯತೆ ಕಂಡುಬಂದಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹಣದ ಆಮಿಷವೊಡ್ಡಿದ್ದ ಪ್ರಕರಣ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಗೆ ಕಲಬುರ್ಗಿ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿತ್ತು. ಇದನ್ನು ತೆರವುಗೊಳಿಸುವಂತೆ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ಕಂದಕೂರ ಅರ್ಜಿ ಸಲ್ಲಿಸಿದ್ದರು.
ಶರಣಗೌಡ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ಈಗಾಗಲೇ ವಾದ ಮಂಡಿಸಿದ್ದು, ಹಿರಿಯ ವಕೀಲ ಸಿ.ವಿ.ನಾಗೇಶ್ ರಿಂದ ಯಡಿಯೂರಪ್ಪ ಪರ ವಾದ ಮಂಡನೆ ನಡೆಯಲಿದೆ. ಮಧ್ಯಾಹ್ನದ ನಂತರ ತೀರ್ಪು ಹೊರಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.