ಕಲಬುರಗಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೆಲ ಸಂಘಟನೆಗಳು ನಾಳೆ (ಡಿ. 19) ರಂದು ಕಲಬುರಗಿ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಳೆ ಕಲಬುರಗಿ ಬಂದ್.. ನಗರದಲ್ಲಿ ನಿಷೇಧಾಜ್ಞೆ ಜಾರಿ.. - ಪೀಪಲ್ಸ್ ಫೋರಂ ಸಂಘಟನೆಯಿಂದ ನಾಳೆ ಕಲಬುರಗಿ ಬಂದ್ ಗೆ ಕರೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೆಲ ಸಂಘಟನೆಗಳು ನಾಳೆ (ಡಿ.19) ರಂದು ಕಲಬುರಗಿ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಪೀಪಲ್ಸ್ ಫೋರಂ ಸಂಘಟನೆ ನಾಳೆ ಕಲಬುರಗಿ ಬಂದ್‌ಗೆ ಕರೆ ನೀಡಿದೆ. ಆದರೆ, ಪೊಲೀಸ್ ಇಲಾಖೆ ಬಂದ್ ನಡೆಸಲು ಸಂಘಟನೆಗೆ ಅನುಮತಿ ನಿರಾಕರಿಸಿದೆ. ಆದ್ರೂ ಸಂಘಟಕರು ನಾಳೆ ರಸ್ತೆಗಿಳಿದು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಬಂದ್ ಕರೆಯಿಂದ ಸಾರ್ವಜನಿಕರಿಗೆ ತೊಂದರೆ ಜೊತೆಗೆ ಕೆಪಿಎಸ್‌ಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆ ಪರೀಕ್ಷಾರ್ಥಿಗಳಿಗೆ ತೊಂದರೆ ಆಗದಂತೆ ಹಾಗು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ 144 ಜಾರಿ ಮಾಡಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ 21 ರ ಮಧ್ಯರಾತ್ರಿ ವರೆಗೆ 144 ಸೆಕ್ಷನ್ ಜಾರಿಗೊಳಿಸಿ ಕಲಬುರಗಿ ಪೊಲೀಸ್ ಕಮೀಷನರ್ ಎಮ್ ಎನ್ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಅಲ್ಲದೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.