ಸೇಡಂ: ಉತ್ತರ ಪ್ರದೇಶದ ಹಥ್ರಾಸ್ನ ಬಾಲಕಿ ಅಮಾನುಷವಾಗಿ ಕೊಲೆಯಾಗಿದ್ದು, ಕೊಲೆಗಡುಕರನ್ನು ಗಲ್ಲಿಗೇರಿಸುವಂತೆ ಬಹುಜನ ಸಮಾಜ ಪಾರ್ಟಿಯಿಂದ ಪ್ರತಿಭಟನೆ ನಡೆಸಲಾಯಿತು.
ಸಹಾಯಕ ಆಯುಕ್ತರ ಕಚೇರಿ ಎದುರು ಯುಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ನಂತರ ಮನವಿ ಪತ್ರವನ್ನು ಸಹಾಯಕ ಆಯುಕ್ತ ರಮೇಶ ಕೋಲಾರ ಅವರಿಗೆ ಸಲ್ಲಿಸಿದರು. ಕೂಡಲೇ ಕೊಲೆಗಡುಕರನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ತಾಲೂಕು ಅಧ್ಯಕ್ಷ ರೇವಣಸಿದ್ದ ಶಿಂಧೆಗೆ ಒತ್ತಾಯಿಸಿದರು.
ಬಹುಜನ ಸಮಾಜ ಪಾರ್ಟಿ ವತಿಯಿಂದ ಕೊಲೆಯಾದ ಬಾಲಕಿ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಅಲ್ಲದೇ ಜೆಡಿಎಸ್ ವತಿಯಿಂದಲೂ ಸಹ ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಲಾಯಿತು. ಈ ಕುರಿತು ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ಸಹಾಯಕ ಆಯುಕ್ತ ರಮೇಶ ಕೋಲಾರ ಅವರಿಗೆ ಸಲ್ಲಿಸಿದ ಕಾರ್ಯಕರ್ತರು, ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೂಡಲೇ ಯುವತಿಯ ಕೊಲೆಗಡುಕರನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಅವರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಜಗನ್ನಾಥರೆಡ್ಡಿ ಗೋಟೂರು, ಶಿವಪುತ್ರಪ್ಪ ಮೋಘಾ, ಆರ್.ಆರ್. ಪಾಟೀಲ ಪಸ್ತಾಪುರ, ರಿಯಾಜ ಪಟೇಲ ಇನ್ನಿತರರು ಇದ್ದರು.