ಕಲಬುರಗಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ಕಲಬುರಗಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ನಗರದಲ್ಲಿಂದು ಬೃಹತ್ ಪೊಲೀಸ್ ಪಥಸಂಚಲನ ನಡೆಸಲಾಯಿತು.
ಕೆಎಸ್ಆರ್ಪಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ನಗರದ ನಗರೇಶ್ವರ ಶಾಲೆಯಿಂದ ಜಗತ್ ವೃತ್ತದವರೆಗೆ 5 ಕಿ.ಮೀ ಪಥಸಂಚಲನ ನಡೆಸಿದರು. ಪಥಸಂಚಲನವು ಗಂಜ್ ಪ್ರದೇಶದಿಂದ ಸೂಪರ್ ಮಾರ್ಕೆಟ್ ಮಾರ್ಗವಾಗಿ ಸಾಗಿದ್ದು, ಪಥಸಂಚಲನದ ವೇಳೆ ಮಹಿಳೆಯರು ಹಾಗೂ ಸಾರ್ವಜನಿಕರು ಪೊಲೀಸ್ ಸಿಬ್ಬಂದಿ ಮೇಲೆ ಹೂ ಚೆಲ್ಲಿ ಜೈ ಜವಾನ್ ಜೈ ಕಿಸಾನ್ ಎಂದು ಘೋಷಣೆ ಕೂಗುವ ಮೂಲಕ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದರು.