ಕರ್ನಾಟಕ

karnataka

ETV Bharat / state

ಸರ್ಕಾರಿ ಶಾಲೆಗೆ ಶಿಕ್ಷಕರ ನೇಮಕಕ್ಕೆ ಒತ್ತಾಯಿಸಿ ಪಾಲಕರ ಪ್ರತಿಭಟನೆ - ಶಿಕ್ಷಕರ ನೇಮಕ

ಸರ್ಕಾರಿ ಶಾಲೆಗೆ ಮುಖ್ಯ ಶಿಕ್ಷಕ ಮತ್ತು ಇಂಗ್ಲಿಷ್ ಶಿಕ್ಷಕರ ನೇಮಕಕ್ಕೆ ಒತ್ತಾಯಿಸಿ ಕಲಬುರಗಿಯಲ್ಲಿ ಪಾಲಕರು ಪ್ರತಿಭಟನೆ ನಡೆಸಿದ್ದಾರೆ

ಸರ್ಕಾರಿ ಶಾಲೆಗೆ ಶಿಕ್ಷಕರ ನೇಮಕಕ್ಕೆ ಒತ್ತಾಯಿಸಿ ಪಾಲಕರ ಪ್ರತಿಭಟನೆ

By

Published : Aug 23, 2019, 7:03 AM IST

ಕಲಬುರಗಿ:ಶಿಕ್ಷಕರ ಕೊರತೆ ಹಿನ್ನೆಲೆ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಆಳಂದ ತಾಲೂಕಿನ ಪಡಸಾವಳಗಿ ಗ್ರಾಮದಲ್ಲಿ ನಡೆದಿದೆ.

ಸರ್ಕಾರಿ ಶಾಲೆಗೆ ಶಿಕ್ಷಕರ ನೇಮಕಕ್ಕೆ ಒತ್ತಾಯಿಸಿ ಪಾಲಕರ ಪ್ರತಿಭಟನೆ

ಗ್ರಾಮದ ಸರ್ಕಾರಿ ಶಾಲೆಯಲ್ಲಿ 250ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದರೂ ಮುಖ್ಯ ಶಿಕ್ಷಕ ಮತ್ತು ಇಂಗ್ಲಿಷ್ ಶಿಕ್ಷಕರಿಲ್ಲ. ಈ ಕುರಿತು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಪಾಲಕರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.

ಕೂಡಲೇ ಶಾಲೆಗೆ ಶಿಕ್ಷಕರ ನೇಮಕ ಮಾಡುವಂತೆ ಆಗ್ರಹಿಸಿದರು. ಎಂಟು ದಿನಗಳಲ್ಲಿ ಅತಿಥಿ ಶಿಕ್ಷಕರ ನೇಮಕ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆಯನ್ನು ಕೈಬಿಡಲಾಯಿತು.

ABOUT THE AUTHOR

...view details