ಕಲಬುರಗಿ: ರಸ್ತೆ ದಾಟುತ್ತಿದ್ದಾಗ ಕಾರು ಹರಿದು ಪಾದಚಾರಿ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಕಲಬುರಗಿ ಜಿಲ್ಲೆಯ ಹಳೆ ಜೇವರ್ಗಿ ರಸ್ತೆಯ ಪಂಚಶೀಲ ನಗರದಲ್ಲಿ ನಡೆದಿದೆ.
ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸ್ಥಳದಲ್ಲೆ ಸಾವು - kannandanews
ರಸ್ತೆದಾಟುವ ವೇಳೆ ವ್ಯಕ್ತಿಯೋರ್ವನ ಮೇಲೆ ಕಾರ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
![ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸ್ಥಳದಲ್ಲೆ ಸಾವು](https://etvbharatimages.akamaized.net/etvbharat/prod-images/768-512-3957788-thumbnail-3x2-suryajpeg.jpg)
ಕಾರು ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
ಕಾರು ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
ಕರಣ ಕುಮಾರ ತಳವಾರ (35) ಮೃತ ವ್ಯಕ್ತಿ. ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ನುಗ್ಗಿಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ.
ಘಟನೆ ನಂತರ ಕಾರ್ ಡ್ರೈವರ್ ಪರಾರಿಯಾದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪರಾರಿಯಾದ ಡ್ರೈವರ್ ಪತ್ತೆಗೆ ಬಲೆ ಬೀಸಲಾಗಿದೆ.